ಕಟೀಲು ದೇವಳಕ್ಕೆ ಕಾಂತಾರ ಖ್ಯಾತಿಯ ನಟ ನಿರ್ದೇಶಕ ರಿಷಬ್ ಶೆಟ್ಟಿ ಬೇಟಿ
Thursday, March 6, 2025
ಕಟೀಲು:ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕಾಂತಾರ ಖ್ಯಾತಿಯ ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರು ಪತ್ನಿ ಮಕ್ಕಳೊಂದಿಗೆ ಭೇಟಿ ನೀಡಿ ದುರ್ಗೆಗೆ ಸೀರೆ ಅರ್ಪಿಸಿದರು.ದೇವಸ್ಥಾನದ ವತಿಯಿಂದ ದೇವರ ಶೇಷ ವಸ್ತ್ರ ಹಾಗೂ ಪ್ರಸಾದವನ್ನು ನೀಡಿ ಗೌರವಿಸಲಾಯಿತು. ನಂತರ ಮಾದ್ಯಮ ದೊಂದಿಗೆ ಮಾತನಾಡಿದ ರಿಷಬ್ ಶೆಟ್ಟಿ ಅವರು ಕಾಂತಾರ 2 ಚಿತ್ರೀಕರಣ ಕೊನೆಯ ಹಂತದಲ್ಲಿದ್ದು,
ಕುಟುಂಬ ಸಮೇತರಾಗಿ ಟೆಂಪಲ್ ರನ್ನ್ ಮಾಡುತ್ತಿದ್ದೇನೆ.ಅಕ್ಟೋಬರ್ 2 ರಂದು ಚಿತ್ರ ಬಿಡುಗಡೆ ಮಾಡುವುದಾಗಿ ಚಿಂತನೆ ಮಾಡಲಾಗಿದೆ ಎಂದರು.
ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಡಿಕೆಶಿ ವಾರ್ನಿಂಗ್ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದು ನಾನು ಚಿತ್ರದ ಶೂಟಿಂಗ್ ನಲ್ಲಿದ್ದೇನೆ ಆ ಬಗ್ಗೆ ಗೊತ್ತಿಲ್ಲ ಎಂದರು.
ಈ ಸಂದರ್ಭ ಅನಂತ ಪದ್ಮನಾಭ ಆಸ್ರಣ್ಣ, ಸದಾನಂದ ಆಸ್ರಣ್ಣ, ಶ್ರೀಕರ ಆಸ್ರಣ್ಣ ಮತ್ತಿತರರು ಇದ್ದರು