-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಎ.18: ವಾಹನಗಳ ಸಂಚಾರದಲ್ಲಿ ಬದಲಾವಣೆ

ಎ.18: ವಾಹನಗಳ ಸಂಚಾರದಲ್ಲಿ ಬದಲಾವಣೆ

(ಫೈಲ್ ಚಿತ್ರ)
ಮಂಗಳೂರು: ನಗರದ ಅಡ್ಯಾರ್ ಕಣ್ಣೂರು ಬಳಿ ಇರುವ ಷಾ ಗಾರ್ಡನ್ ಮೈದಾನದಲ್ಲಿ ಎ.18 ರಂದು  ಪ್ರತಿಭಟನಾ ಸಮಾವೇಶವು ನಡೆಯಲಿದ್ದು, ಅಡ್ಯಾರು ಕಣ್ಣೂರು ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿದ್ದು, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ  ಅಂದು ಮಧ್ಯಾಹ್ನ 12-00 ಗಂಟೆಯಿಂದ ರಾತ್ರಿ 9-00 ಗಂಟೆಯ ವರೆಗೆ ಸಂಚಾರ ದಟ್ಟಣೆ ಆಗಬಹುದಾದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಡೀಲ್ ಕಣ್ಣೂರು - ಅಡ್ಯಾರ್ ಸಹ್ಯಾದ್ರಿ ಅರ್ಕುಳ (ಎರಡು ಕಡೆಯಿಂದ) ಮಾರ್ಗಗಳ ಬದಲಾಗಿ ಕೆಳಕಂಡ ಪರ್ಯಾಯ ಮಾರ್ಗಗಳನ್ನು ಉಪಯೋಗಿಸಲು ಮಂಗಳೂರು ಪೊಲೀಸ್ ಕಮೀಷನರ್ ರವರ ಪ್ರಕಟಣೆ ತಿಳಿಸಿದೆ.ಸ್ಥಳೀಯ, ತುರ್ತು ಹಾಗೂ ಅತ್ಯಗತ್ಯ ಕಾರಣಗಳಿಗೆ ಬರುವ ವಾಹನಗಳನ್ನು ಹೊರತು ಪಡಿಸಿ ಬೇರೆ ವಾಹನಗಳು ಪರ್ಯಾಯ ಮಾರ್ಗವನ್ನು ಉಪಯೋಗಿಸುವಂತೆ  ಮಾಹಿತಿ ತಿಳಿಸಿದೆ.

ವಾಹನ ಸಂಚಾರ ದಟ್ಟಣೆಯಾಗುವ ಮಾರ್ಗಗಳು

ಪಂಪುವೆಲ್ / ನಂತೂರು - ಪಡೀಲ್ - ಕಣ್ಣೂರು - ಅಡ್ಯಾರ್ - ಸಹ್ಯಾದ್ರಿ ಅರ್ಕುಳ - ಪರಂಗಿಪೇಟೆ ತುಂಬೆ ಬಿ.ಸಿ.ರೋಡ್ (ರಾಷ್ಟ್ರೀಯ ಹೆದ್ದಾರಿ 73) ರಸ್ತೆಯಲ್ಲಿ ಮಂಗಳೂರು ನಗರಕ್ಕೆ ಬರುವ ಹಾಗೂ ಹೋಗುವ ಘನ ವಾಹನಗಳು, ಎಲ್ಲಾ ತರಹದ ಸರಕು ವಾಹನಗಳು ಹಾಗೂ ಬಸ್ಸುಗಳ ಸಂಚಾರಕ್ಕಾಗಿ ಬದಲಿ ಮಾರ್ಗ ಉಪಯೋಗಿಸುವುದು.

ಪಡೀಲ್ - ಕಣ್ಣೂರು - ಅಡ್ಯಾರ್ ಕಟ್ಟೆ ರಸ್ತೆಯಲ್ಲಿ ಮಂಗಳೂರು ನಗರಕ್ಕೆ ಬರುವ ಹಾಗೂ ಹೊರಡುವ ಎಲ್ಲಾ ತರಹದ ಲಘ ವಾಹನಗಳು ಮತ್ತು ದ್ವಿ-ಚಕ್ರ ವಾಹನಗಳ ಚಾಲಕರು / ಸವಾರರು ಬದಲಿ ಮಾರ್ಗ ಉಪಯೋಗಿಸುವುದು.

ಪಂಪುವೆಲ್ / ನಂತೂರು - ಪಡೀಲ್ - ಕಣ್ಣೂರು - ಅಡ್ಯಾರ್ - ಸಹ್ಯಾದ್ರಿ ಅರ್ಕುಳ - ಪರಂಗಿಪೇಟೆ ತುಂಬೆ ಬಿ.ಸಿ.ರೋಡ್ (ರಾಷ್ಟ್ರೀಯ ಹೆದ್ದಾರಿ - 73) ರಸ್ತೆಯ ಎರಡು ಬದಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡತಕ್ಕದಲ್ಲ.

ಸಾರ್ವಜನಿಕರು ಈ ಕೆಳಗಿನಂತೆ ಪರ್ಯಾಯ ರಸ್ತೆಗಳನ್ನು ಬಳಸಲು ಕೋರಲಾಗಿದೆ.

> ಮೆಲ್ಲಾರು ಜಂಕ್ಷನ್- ಮತ್ತೂರು/ಬಂಟ್ವಾಳ/ಬೆಳ್ತಂಗಡಿ ಕಡೆಯಿಂದ ಮಂಗಳೂರು ನಗರ/ ಕಾಸರಗೋಡು ಕಡೆಗೆ ಬರುವ ವಾಹನಗಳು ಮೆಲ್ದಾರ್ ಜಂಕ್ಷನ್ ಬೊಳಿಯಾರ್ ಮುಡಿಪು ದೇರಳಕಟ್ಟೆ ತೊಕ್ಕೊಟ್ಟು ಮೂಲಕ ಸಂಚರಿಸುವುದು.

> ಬಿ.ಸಿ. ರೋಡ್ ಪೊಳಲಿ ದ್ವಾರ-ಬಿ.ಸಿ.ರೋಡ್ ಕಡೆಯಿಂದ ಮಂಗಳೂರು/ಉಡುಪಿ ಕಡೆಗೆ ಸಂಚರಿಸುವ ವಾಹನಗಳು ಪೊಳಲಿ ದ್ವಾರದ ಮೂಲಕ ಕಲ್ಪನೆ ಜಂಕ್ಷನ್ ನೀರುಮಾರ್ಗ ಬೈತುರ್ಲಿ ಕುಲಶೇಖರ - ನಂತೂರು ಮೂಲಕ ಸಂಚರಿಸುವುದು.

> ವಳಚ್ಚಿಲ್ ಜಂಕ್ಷನ್-ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ವಳಚ್ಚಿಲ್‌ನಲ್ಲಿ ಬಲಕ್ಕೆ ತಿರುಗಿ ಮೇರ್ಲಪದವು ನೀರುಮಾರ್ಗ - ಬೈತುರ್ಲಿ - ನಂತೂರು ಮೂಲಕ ಸಂಚರಿಸುವುದು.

> ಅಡ್ಯಾರ್ ಕಟ್ಟಿ-ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ಅಡ್ಯಾರ್ ಕಟ್ಟೆ ಬಳಿ ಎಡಕ್ಕೆ ತಿರುಗಿ ಹರೇಕಳ ಬ್ರಿಡ್ಜ್ ಕೊಣಾಜೆ - ದೇರಳಕಟ್ಟೆ - ತೊಕ್ಕೊಟ್ಟು ಮೂಲಕ ಸಂಚರಿಸುವುದು.

>

ಪಂಪ್‌ವೆಲ್ ಜಂಕ್ಷನ್- ಮಂಗಳೂರು ನಗರದ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟು - ದೇರಳಕಟ್ಟೆ ಮುಡಿಪು ಬೊಳಿಯಾರ್ ಮೆಲ್ಕಾರ್ ಮೂಲಕ ಸಂಚರಿಸುವುದು.

>

ನಂತೂರು ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಬಿಕರ್ನಕಟ್ಟೆ ಕುಲಶೇಖರ ಬೈತುರ್ಲಿ ಜಂಕ್ಷನ್ ನೀರುಮಾರ್ಗ ಕಲ್ಪನೆ ಜಂಕ್ಷನ್-ಬಿ.ಸಿ ರೋಡ್ ಕೈಕಂಬದ ಪೊಳಲಿ ದ್ವಾರದ ಮೂಲಕ ಸಂಚರಿಸುವುದು.

>

ಕೆ.ಪಿ.ಟಿ. ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಪದವಿನಂಗಡಿ ಪಚ್ಚನಾಡಿ ವಾಮಂಜೂರು ಬೈತುರ್ಲಿ ಜಂಕ್ಷನ್ - ನೀರುಮಾರ್ಗ ಕಲ್ಪನೆ ಮೂಲಕ ಅಥವಾ ಬೋಂದೆಲ್ ಸಂಚರಿಸುವುದು. ಕಾವೂರು ಕೈಕಂಬ - ಮೂಡಬಿದ್ರೆ ಮೂಲಕ

> ಮುಲ್ಕಿ ವಿಜಯಸನ್ನಿಧಿ- ಉಡುಪಿ / ಮುಲ್ಕಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಿನ್ನಿಗೋಳಿ - ಮೂಡಬಿದ್ರೆ ಸಿದ್ದಕಟ್ಟೆ - ಬಂಟ್ವಾಳ ಮೂಲಕ ಸಂಚರಿಸುವುದು.

> ಪಡುಬಿದ್ರೆ ಉಡುಪಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಾರ್ಕಳ - ಮೂಡಬಿದ್ರೆ ಸಿದ್ಧಕಟ್ಟೆ - ಬಂಟ್ವಾಳ ಮೂಲಕ ಸಂಚರಿಸುವುದು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ