ಮಂಗಳೂರು: ವಿದ್ಯಾರ್ಥಿಗಳಿಗೆ ಮಹಿಳಾ ಸಬಲೀಕರಣ ಮಾಹಿತಿ ಕಾರ್ಯಕ್ರಮ
Saturday, April 26, 2025
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಬಿಜೈ ಇದರ ವತಿಯಿಂದ ಕಾರ್ದ ಸ್ಟ್ರೀಟ್ ನ ದಯಾನಂದ ಪೈ ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಮಹಿಳಾ ಸಬಲೀಕರಣಕ್ಕಾಗಿ ಇರುವ ವಿವಿಧ ಯೋಜನೆಗಳ ಬಗ್ಗೆ ಅರಿವು ಕಾರ್ಯಕ್ರಮ ಬುಧವಾರ ನಡೆಯಿತು.
ಅಭಿವೃದ್ಧಿ ಅಧೀಕ್ಷಕಿ ಶ್ರೀಮತಿ ಚಂದ್ರಿಕಾ ಎಸ್ ನಾಯಕ್, ಜಿಲ್ಲಾ ಮಿಷನ್ ಸಂಯೋಜಕಿ ಶ್ರೀಮತಿ ಅನುಷ್ಯ, ಲಿಂಗತ್ವ ತಜ್ಞೆ ಶ್ರೀಮತಿ ವಿಶಾಲಾಕ್ಷಿ, ಪಿಎಂ ಮಾತೃ ವಂದನಾ ಯೋಜನೆಯ ಕಾರ್ಯಕ್ರಮ ಸಹಾಯಕಿ ಕುಮಾರಿ ಕಾವ್ಯ ಆರ್ ಕೆ, ಮಹಿಳೆಯರ ಅಭಿವೃದ್ಧಿಗಾಗಿ ಇರುವ ಸರಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಉಸ್ಮಾನ್ ಎ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾll ಪಿ. ದಯಾನಂದ ಪೈ ಪಿ ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ದಿವ್ಯ ಜಿ. ಎಲ್. ಮುಖ್ಯ ಅತಿಥಿಯಾಗಿದ್ದರು. ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಮತ್ತು ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.