-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಕುಡುಪು ಗುಂಪು ಹತ್ಯೆ ಪ್ರಕರಣ; ಸಿಒಡಿ ತನಿಖೆಗೆ ಇನಾಯತ್ ಅಲಿ ಆಗ್ರಹ

ಕುಡುಪು ಗುಂಪು ಹತ್ಯೆ ಪ್ರಕರಣ; ಸಿಒಡಿ ತನಿಖೆಗೆ ಇನಾಯತ್ ಅಲಿ ಆಗ್ರಹ

ಮಂಗಳೂರು: ನಗರದ ಹೊರವಲಯದ ಕುಡುಪುವಿನಲ್ಲಿ ನಡೆದ ಕೇರಳದ ವಯನಾಡು ಜಿಲ್ಲೆಯ ಅಶ್ರಫ್ ಎಂಬವರ ಗುಂಪು ಹತ್ಯೆ ಪ್ರಕರಣದ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಪತ್ರ ಬರೆದಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಪ್ರಕರಣವನ್ನು ಸಿಒಡಿ(ಸಿಐಡಿ) ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

"ಮೃತ ದೇಹದ ಮೇಲೆ ಹಲ್ಲೆ ನಡೆಸಿ ಗಂಭೀರ ಗಾಯಗಳು ಉಂಟಾಗಿರುವುದು ಕಂಡುಬಂದರೂ ಸಹ ಪೊಲೀಸ್ ಇಲಾಖೆ ಕೂಡಲೇ ಕೊಲೆ ಪ್ರಕರಣವನ್ನು ದಾಖಲಿಸಿಕೊಳ್ಳದೆ ಪ್ರಕರಣವನ್ನು ಯುಡಿಆರ್ ಪ್ರಕರಣವೆಂದು ದಾಖಲಿಸಿಕೊಂಡಿರುತ್ತಾರೆ, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಅನುಮಾನ ಮತ್ತು ಆಕ್ರೋಶ ವ್ಯಕ್ತವಾದ ನಂತರ ಕೊಲೆ ಪ್ರಕರಣ ಎಂದು ದಾಖಲಿಸಲಾಗಿರುತ್ತದೆ. ಇಪ್ಪತ್ತನಾಲ್ಕು ಗಂಟೆ ಕಳೆದ ನಂತರವೇ ಇಂತಹ ಗಂಭೀರ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ" ಎಂದು ಪೊಲೀಸ್ ಇಲಾಖೆಯ ತನಿಖೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಇನಾಯತ್ ಅಲಿ "ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಒಡಿ(ಸಿಐಡಿ) ತನಿಖೆ ನಡೆಸಿ, ನೈಜ ಆರೋಪಿಗಳನ್ನು ಪತ್ತೆ ಹಚ್ಚುವಂತೆ" ತಮ್ಮ ಪತ್ರದಲ್ಲಿ ಮನವಿ ಮಾಡಿರುತ್ತಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ