ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿ ಲಿ. ಹಳೆಯಂಗಡಿ 349.77 ಕೋಟಿ ರೂ. ವ್ಯವಹಾರ : ಎಚ್ ವಸಂತ್ ಬೆರ್ನಾರ್ಡ್
Tuesday, April 1, 2025
ಹಳೆಯಂಗಡಿ:ಸದಸ್ಯರ ಪ್ರೋತ್ಸಾಹ, ಗ್ರಾಹಕರ ಸಹಕಾರ, ಆಡಳಿತ ವರ್ಗದವರ ಮಾರ್ಗದರ್ಶನ ಹಾಗೂ ಸಿಬ್ಬಂದಿಗಳ ಕಾರ್ಯಶ್ರಮತೆಯಿಂದಾಗಿ 2024-25 ನೇ ಸಾಲಿನಲ್ಲಿ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿ ಲಿ. ಹಳೆಯಂಗಡಿ 349.77 ಕೋಟಿ ರೂ ವ್ಯವಹಾರ ನಡೆಸಿದೆ ಎಂದು ಸೊಸೈಟಿಯ ಅಧ್ಯಕ್ಷ ಎಚ್ ವಸಂತ್ ಬೆರ್ನಾರ್ಡ್ ಹೇಳಿದರು.
2021 ರಲ್ಲಿ ಪ್ರಾರಂಭವಾದ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿಯು ಈಗಾಗಲೇ 3 ಶಾಖೆಯನ್ನು ಹೊಂದಿದ್ದು, ವರದಿ ಸಾಲಿನಲ್ಲಿ 349.77 ಕೋಟಿ ರೂ. ವ್ಯವಹಾರವನ್ನು ದಾಖಲಿಸಿದೆ. ಕಳೆದ ಸಾಲಿನ ವ್ಯವಹಾರವನ್ನು ತುಲನೆ ಮಾಡಿದರೇ ಶೇ 70.45% ಏರಿಕೆಯನ್ನು ಕಂಡಿದೆ. ಪ್ರಸ್ತುತ 29.36 ಕೋಟಿ ರೂ. ಠೇವಣಿ, 24.74 ಕೋಟಿ ರೂ. ಸಾಲ ಮತ್ತು ಮುಂಗಡಗಳೊAದಿಗೆ, ರೂ. 96.44 ಲಕ್ಷ ಪಾಲು ಬಂಡವಾಳ, 57.05 ಲಕ್ಷ ನಿಧಿಗಳು, 30.90 ಕೋಟಿ ದುಡಿಯುವ ಬಂಡವಾಳ ಹೊಂದಿರುತ್ತದೆ ಎಂದು ತಿಳಿಸಿದರು. 2024-25ನೇ ಸಾಲಿನಲ್ಲಿ ಉತ್ತಮ ಲಾಭಾಂಶ ಗಳಿಸಿದ್ದು, ಸದಸ್ಯರಿಗೆ ಉತ್ತಮ ರೀತಿಯ ಪಾಲು ಮುನಾಫೆಯನ್ನು ಹಂಚುವ ಗುರಿ ಹೊಂದಿದೆ ಎಂದರು. ಅವಲೋಕನ ಸಭೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ಪ್ರತಿಭಾ ಕುಳಾಯಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ ಉಪಸ್ಥಿತರಿದ್ದರು.