ಸ್ಕೂಟರ್ ಗೆ ಲಾರಿ ಡಿಕ್ಕಿಯಾಗಿ ಮಹಿಳೆಗೆ ಗಂಭೀರ ಗಾಯ
Wednesday, April 16, 2025
ಕಿನ್ನಿಗೋಳಿ : ಸ್ಕೂಟರ್ ಗೆ ಲಾರಿ ಡಿಕ್ಕಿಯಾಗಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೂಡಬಿದಿರೆ - ಕಿನ್ನಿಗೋಳಿ - ಮೂಲ್ಕಿ ರಾಜ್ಯಹೆದ್ದಾರಿಯ ಐಕಳ ಎಂಬಲ್ಲಿ ನಡೆದಿದೆ.
ಗಾಯಗೊಂಡ ಮಹಿಳೆಯನ್ನು ನಿಡ್ಡೋಡಿ ಶುಂಠಿಲಪದವು ನಿವಾಸಿ ವಿಶಾಲಾಕ್ಷ (32) ಎಂದು ಗುರುತಿಸಲಾಗಿದೆ. ಮೂಡಬಿದ್ರೆ ಕಡೆಯಿಂದ ಕಿನ್ನಿಗೋಳಿ ಕಡೆಗೆ ಬರುತ್ತಿದ್ದ ಲಾರಿಯು ಕಿನ್ನಿಗೋಳಿ ಕಡೆಯಿಂದ ಐಕಳ ಕಡೆಗೆ ಹೋಗುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟರ್ ಸವಾರೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು ಉತ್ತರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.