
ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾಮಹೋತ್ಸವ,ಧ್ವಜಾರೋಹಣ
Tuesday, April 15, 2025
ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾಮಹೋತ್ಸವದ ಪ್ರಯುಕ್ತ ಭಾನುವಾರದಂದು ಬೆಳಿಗ್ಗೆ ಧ್ವಜಾರೋಹಣ ನಡೆಯಿತು, ಬೆಳಿಗ್ಗೆ ಕ್ಷೇತ್ರದ ಅರ್ಚಕರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಶ್ರೀ ದೇವರ ಬಲಿ ಹೊರಟು ನಂತರ ಧ್ವಜಾರೋಹಣ, ಶಿಬರೂರು ಕೊಡಮಣಿತ್ತಾಯ ಮತ್ತು ಶ್ರೀ ದೇವರ ಭೇಟಿ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.
ತಂತ್ರಿಗಳಾದ ಕೃಷ್ಣರಾಜ ತಂತ್ರಿ, ದೇವಳದ ಮೊಕ್ತೇಸರ ವಾಸುದೇವ ಆಸ್ರಣ್ಣ, ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಮೊಕ್ತೇಸರ ಸನತ್ ಕುಮಾರ್ ಕೊಡೆತ್ತೂರುಗುತ್ತು, ಅರ್ಚಕರಾದ ವೆಂಕಟರಮಣ ಆಸ್ರಣ್ಣ, ಲಕ್ಷ್ಮೀನಾರಾಯಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿಪ್ರಸಾದ್ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ಅತ್ತೂರು ಬೈಲು ವೆಂಕಟ ರಾಜ ಉಡುಪ, ಜಯರಾಮ ಉಡುಪ ಮೂಡುಮನೆ, ವೇದವ್ಯಾಸ ಉಡುಪ ದೇವಸ್ಯಮಠ, ಪ್ರವೀಣ್ ಶೆಟ್ಟಿ ಕೊಡೆತ್ತೂರುಗುತ್ತು, ಬಿಪಿನ್ ಚಂದ್ರ ಶೆಟ್ಟಿ ಕೊಡೆತ್ತೂರುಗುತ್ತು ಹಾಗೂ ಮೊದಲಾದವರು. ಉಪಸ್ಥಿತರಿದ್ದರು.