ಕಟೀಲು ಪದವಿ ಕಾಲೇಜಿನಲ್ಲಿ ಪ್ರಶಸ್ತಿ ವಿತರಣಾ ಸಮಾರಂಭ
Wednesday, April 30, 2025
ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಿತು.
ಕಟೀಲು ದೇಗುಲದ ಅನುವಂಶಿಕ ಅರ್ಚಕ ಕಮಲಾದೇವಿ ಪ್ರಸಾದ ಅಸ್ರಣ್ಣ ಆಶೀರ್ವಚನ ನೀಡಿ ಭಾರತೀಯ ಸಂಸ್ಕೃತಿಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾಲೇಜಿನ ನಿವೃತ್ತ ಉಪನ್ಯಾಸಕ ಡಾ. ಸೋಂದಾ ಭಾಸ್ಕರ್ ಭಟ್ ಅವರು ಪ್ರತಿಯೊಬ್ಬರುತಮ್ಮ ವೃತ್ತಿಯ ಜೊತೆಗೆ ಪ್ರವೃತ್ತಿಯನ್ನು ಮೈಗೂಡಿಸಿಕೊಳ್ಳಬೇಕೆಂದರು.
ಕಾಲೇಜಿನ ನಿವೃತ್ತ ಇತಿಹಾಸ ಉಪನ್ಯಾಸಕ ಸುರೇಶ್ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕಿರಣ್ ಶೆಟ್ಟಿ ವಿದ್ಯಾರ್ಥಿಗಳಿಗೆ ಕ್ರೀಡಾ ಮತ್ತು ಸಾಹಿತ್ಯಿಕ ಪ್ರಶಸ್ತಿಗಳನ್ನು ವಿತರಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ವಿಜಯ ವಿ., ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ರಮೇಶ್ ಕೆ. ಜಿ. ಉಪಸ್ಥಿತರಿದ್ದರು. ವಾಣಿಜ್ಯ ಉಪನ್ಯಾಸಕಿ ಶ್ರೀಮತಿ ಶಿಪಾಲಿ ಎಂ. ಸ್ವಾಗತಿಸಿದರು, ವಿದ್ಯಾರ್ಥಿನಿಯರಾದ ಪ್ರಾಂಜಲಿ ಮತ್ತುಯೋಗಿನಿ ಸುಷ್ಮಾ ಕಾರ್ಯಕ್ರಮ ನಿರ್ವಹಣೆ ಮಾಡಿದರು ಹಾಗೂ ವಾಣಿಜ್ಯ ಉಪನ್ಯಾಸಕಿ ಕುಮಾರಿ ಅನನ್ಯಾ ಧನ್ಯವಾದ ಸಮರ್ಪಿಸಿದರು.