ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ಹೊಲಿಗೆ ಯಂತ್ರ ವಿತರಣೆ
Tuesday, April 22, 2025
ಕಿನ್ನಿಗೋಳಿ:ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಕಿನ್ನಿಗೋಳಿ ಶಾಖೆಯ ಪ್ರಥಮ ವಾರ್ಷಿಕೋತ್ಸವವು ಕಿನ್ನಿಗೋಳಿ ಶಾಖೆಯಲ್ಲಿ ಭಾನುವಾರದಂದು ಆಯೋಜನೆಗೊಂಡಿತು. ವಾರ್ಷಿಕೋತ್ಸವದ ಪ್ರಯುಕ್ತ ಅಶಕ್ತ ನಿರುದ್ಯೋಗಿ ಯುವತಿಯರಿಗೆ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಲಾಯಿತು.
ಪ್ರಿಯದರ್ಶಿನಿ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷ ವಸಂತ್ ಬೆರ್ನಾರ್ಡ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭ ಕಿನ್ನಿಗೋಳಿ ಇನ್ನರ್ ವೀಲ್ ಕ್ಲಬ್ ನಿಯೋಜಿತ ಅಧ್ಯಕ್ಷೆ ರೇಖಾ ರಘುರಾಮ್ ಶೆಟ್ಟಿ,ಕಿನ್ನಿಗೋಳಿ ವನಿತಾ ಸಮಾಜದ ಅಧ್ಯಕ್ಷೆ ನಿರ್ಮಲಾ ವಿ. ನಾಯಕ್, ಸೊಸೈಟಿ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ನಿರ್ದೇಶಕ ಉಮಾನಾಥ ಜೆ. ಶೆಟ್ಟಿಗಾರ್, ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಶಾಖಾ ಪ್ರಬಂಧಕ ಮೋಹನ್ ದಾಸ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಕಾಶ್ ಕಿನ್ನಿಗೋಳಿ ಮತ್ತಿತರರು ಉಪಸ್ಥಿತರಿದ್ದರು.
ಮೋಹನ್ ದಾಸ್ ಸ್ವಾಗತಿಸಿದರು. ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ವಂದಿಸಿದರು. ಸಿಬ್ಬಂದಿ ಕ್ಯಾರೊಲ್ ಡಿಸೋಜ ನಿರೂಪಿಸಿದರು.