ಬಪ್ಪನಾಡು ಹಗಲು ರಥೋತ್ಸವ
Friday, April 18, 2025
ಮೂಲ್ಕಿ : ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ದೇವರ ಹಗಲು ರಥೋತ್ಸವ ,ಶ್ರೀದೇವರ ಉತ್ಸವ ಬಲಿ ಯು ಗುರುವಾರದಂದು ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅತ್ತೂರು ರಾಘವೇಂದ್ರ ಉಡುಪ,
ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.ಮಧ್ಯಾಹ್ನ ಮಹಾ ಅನ್ನಸಂತರ್ಪಡೆ ನಡೆಯಿತು
ಈ ಸಂದರ್ಭ ಕ್ಷೇತ್ರದ ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲ ಕಾಡಿ,ಅನುವಂಶಿಕ ಮೊಕ್ತೇಸರ ಹಾಗೂ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಮಾಜೀ ಸಚಿವ ಅಭಯ್ ಚಂದ್ರ ಜೈನ್
ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಜೀರ್ಣೋದ್ದಾರ ಸಮಿತಿಯ ಶೇಖರ್ ಶೆಟ್ಟಿ ಕಿಲ್ಪಾಡಿ ಹಾಗೂ ಪ್ರಮುಖರುಗಳು ಉಪಸ್ಥಿತರಿದ್ದರು.
ಕ್ ಜಾತ್ರಾ ಮಹೋತ್ಸವದ ಪ್ರಯುಕ್ತ ರಾತ್ರಿ ಶ್ರೀ ದೇವರ ಶಯನೋತ್ಸವ, ಶುಕ್ರವಾರ ಬೆಳಿಗ್ಗೆ ಕವಾಟೋದ್ಘಾಟನೆ, ರಾತ್ರಿ ಬ್ರಹ್ಮ ರಥೋತ್ಸವ ನಡೆಯಲಿದೆ.