ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ
Monday, April 14, 2025
ಮೂಲ್ಕಿ - ಮೂಡುಬಿದಿರೆ ಕ್ಷೇತ್ರ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಸೋಮವಾರದಂದು ಶಿಲಾನ್ಯಾಸ ನೆರವೇರಿಸಿದರು.
ಶಾಸಕ ಉಮಾನಾಥ ಕೋಟ್ಯಾನ್ ಅವರು 1 ಕೋಟಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ಪೂಪಾಡಿಕಲ್ಲು ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ,3 ಕೋಟಿ ರೂಪಾಯಿ ವೆಚ್ಚದಲ್ಲಿ ಬಳ್ಕುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಲೂರು ಕಾಂತಾಬಾರೆ - ಬೂದಾಬಾರೆ ಬಸ್ ನಿಲ್ದಾಣದ ಬಳಿಯಿಂದ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ಹಾಗೂ 3ಕೋಟಿ 50 ಲಕ್ಷ ಪೆರ್ಮುದೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅತ್ರಾಡಿ ರಾಜ್ಯ ಹೆದ್ದಾರಿಯ ಕಿಲೋಮೀಟರ್ 21.18 ರ ಪೆರ್ಮುದೆ ಜಂಕ್ಷನ್ ನಿಂದ ಕಟೀಲು ಕಡೆಗೆ ತಿರುವು ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸವನ್ನು ನೆರವೇರಿಸಿದರು.ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರುಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.