ಎಕ್ಕಾರು:ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ
Sunday, April 13, 2025
ಬಜಪೆ:ಎಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಅವರು ನೆರವೇರಿಸಿದರು.
4ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಎಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋಲೋಡಿ ದ್ವಾರದ ಮುಖ್ಯ ರಸ್ತೆಯಿಂದ ಅರಸುಲಪದವು ತನಕ ರಸ್ತೆ ಅಭಿವೃದ್ಧಿ ಕಾಮಗಾರಿ,2.50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಜಾರಂದಾಯ ದೈವಸ್ಥಾನದ ರಸ್ತೆ ಹಾಗೂ ತಡೆಗೋಡೆ ರಚನೆ ಕಾಮಗಾರಿ,3 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನದ ಪಾರ್ಕಿಂಗ್ ವ್ಯವಸ್ಥೆಗೆ ಆವರಣಗೋಡೆ ಅಭಿವೃದ್ಧಿ ಕಾಮಗಾರಿ,20 ಲಕ್ಷ ರೂಪಾಯಿ ವೆಚ್ಚದಲ್ಲಿ ನೀರುಡೆ ಮುಖ್ಯ ರಸ್ತೆಯಿಂದ ಮಾರ್ಲೊಟ್ಟುವರೆಗೆ ನಿರ್ಮಾಣವಾಗಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.ಈ ಸಂದರ್ಭ ಎಕ್ಕಾರು ಶ್ರೀಕೃಷ್ಣ ಮಠದ ವೇದಮೂರ್ತಿ ಹರಿದಾಸ ಉಡುಪ, ಎಕ್ಕಾರು ಗ್ರಾ.ಪಂ ಅಧ್ಯಕ್ಷ ಪ್ರವೀಣ್ ಆಚಾರ್ಯ, ಎಕ್ಕಾರು ಗ್ರಾ.ಪಂ ಸದಸ್ಯರುಗಳು,ಪ್ರಮುಖರುಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.