ಹಿಂದೂ ಮುಖಂಡನ ಹತ್ಯೆ,ಇಂದು ದ.ಕ ಬಂದ್,ನಿಷೇಧಾಜ್ಞೆ ಜಾರಿ
Friday, May 2, 2025
ಬಜಪೆ:ಬಜಪೆಯ ಕಿನ್ನಿಪದವಿನಲ್ಲಿ ಹಿಂದೂ ಮುಖಂಡ ಸುಹಾಸ್ ಶೆಟ್ಟಿಯ ಭೀಕರ ಹತ್ಯೆ ನಡೆದಿದ್ದು, ಈ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ ದ.ಕ.ಜಿಲ್ಲೆಯಲ್ಲಿ ಇಂದು(ಮೇ.2) ಬಂದ್ ಘೋಷಣೆ ಮಾಡಿದೆ. ನಗರದಾದ್ಯಂತ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ.2ರ ಬೆಳಿಗ್ಗೆ 6 ಗಂಟೆಯಿಂದ ಮೇ.6ರ ಬೆಳಿಗ್ಗೆ 6ಗಂಟೆಯ ವರೆಗೆ ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.