
ಮೇ.20: ಹಳೆಯಂಗಡಿ ಪ್ರಿಯದರ್ಶಿನಿ ಕೊ ಅಪರೇಟಿವ್ ಸೊಸೈಟಿಯ ಸ್ಥಾಪನಾ ದಿನಾಚರಣೆ
Sunday, May 18, 2025
ಹಳೆಯಂಗಡಿ:ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 2023 - 24 ನೇ ಸಾಲಿನ ವಿಶಿಷ್ಟ ಸಾಧನ ಪ್ರಶಸ್ತಿ ಪಡೆದ ಸಂಸ್ಥೆ ಹಳೆಯಂಗಡಿಯ ಪ್ರಿಯದರ್ಶಿನಿ ಕೊ ಅಪರೇಟಿವ್ ಸೊಸೈಟಿ ಲಿ. ಇದರ ಸ್ಥಾಪನಾ ದಿನಾಚರಣೆಯು ಮೇ 20 ರ ಮಂಗಳವಾರದಂದು ಬೆಳಿಗ್ಗೆ 10:30 ಕ್ಕೆ ಸಂಘದ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮೂಲ್ಕಿ ತಾಲೂಕು ಶಾಖೆಯ ಅಧ್ಯಕ್ಷೆ ಶ್ರೀಮತಿ ಶರ್ಲಿ ಸುಮಾಲಿನಿ,ಕೆಮ್ರಾಲ್ ಮಹಿಳಾ ವಿವಿದೋದ್ದೇಶ ಸಹಕಾರಿ ಸಂಘ ನಿ. ಕೆಮ್ರಾಲ್ ಪಕ್ಷಿಕೆರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಮೋಹಿನಿ ಬಿ.ರಾವ್ ,ಪ್ರಿಯದರ್ಶಿನಿ ಕೊ.ಅಪರೇಟಿವ್ ಸೊಸೈಟಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ್,ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ ಹಾಗೂ ಆಡಳಿತ ನಿರ್ದೇಶಕರುಗಳು ಉಪಸ್ಥಿತಲಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.