ಶೇ.100 ಫಲಿತಾಂಶ ದಾಖಲಿಸಿದ ತೋಕೂರು ತಪೋವನದ ಡಾ.ರಾಮಣ್ಣ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ.
Tuesday, May 13, 2025
ಕಿನ್ನಿಗೋಳಿ:ನಿಟ್ಟೆ ಶಿಕ್ಷಣ ಸಂಸ್ಥೆಯ ತೋಕೂರು ತಪೋವನದ ಡಾ.ರಾಮಣ್ಣ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯು ಸಿಬಿಎಸ್‌ಇ 10 ನೇ ತರಗತಿಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. 47 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಶಾಲೆಯ ದಿಯಾ ವಿನೋದ್ 95.6% ಅಂಕ ಪಡೆದು ಟಾಪರ್ ಆಗಿದ್ದಾಳೆ ಎಂದು ಶಾಲೆಯ ಪ್ರಾಂಶುಪಾಲರಾದ ಶ್ರೀಲತಾ ರಾವ್ ತಿಳಿಸಿದ್ದಾರೆ.
ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪುಷ್ಪರಾಜ್ ಚೌಟ ಅವರು ಶಾಲಾ ಆಡಳಿತ ಮಂಡಳಿಗೆ, ಪ್ರಾಂಶುಪಾಲರಿಗೆ, ಎಲ್ಲಾ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.