ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಆರೋಪ,ಆರೋಪಿ ಬಂಧನ
Friday, May 30, 2025
ಕಿನ್ನಿಗೋಳಿ :ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಅರೋಪದಲ್ಲಿ ಯುವಕನೊಬ್ಬನನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಬಜ್ಪೆ ಸಮೀಪದ ಸ್ವಾಮಿಲಪದವು ನಿವಾಸಿ (20) ಪ್ರೀತಮ್ ಎಂದು ಗುರುತಿಸಲಾಗಿದೆ.
ಪಕ್ಷಿಕೆರೆ ಮೂಲದ ಅಪ್ರಾಪ್ತ ಬಾಲಕಿಯನ್ನು ಮಾ.25 ರಂದು ಆಪಹರಿಸಿ ಹಾಸನದ ಉದಯಪುರಕ್ಕೆ ಕರೆದುಕೊಂಡು ಹೋಗಿದ್ದನು.ಈ ಬಗ್ಗೆ ಮೂಲ್ಕಿ ಪೊಲೀಸ್ ಠಾಣಿಯಲ್ಲಿ ಅಪ್ರಾಪ್ತ ಬಾಲಕಿಯ ತಾಯಿ ತನ್ನ ಮಗಳು ಅಪಹರಣ ವಾಗಿದ್ದಾಳೆ ಎಂಬ ದೂರನ್ನು ದಾಖಲು ಮಾಡಿದ್ದರು.
ಆರೋಪಿಯು ಅಪಹರಣ ಮಾಡಿದ್ದ ಅಪ್ರಾಪ್ತ ಬಾಲಕಿಯೊಂದಿಗೆ ಮಂಗಳೂರಿಗೆ ಬರುವ ಮಾಹಿತಿಯನ್ನು ಅರಿತ ಪೊಲೀಸರು ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಆರೋಪಿ ಪ್ರೀತಮ್ ನನ್ನು ವಶಕ್ಕೆ ಪಡೆದಿದ್ದಾರೆ.
ವಿಚಾರಣೆಯ ವೇಳೆ ಬಾಲಕಿಯು ಪ್ರೀತಮ್ ನನ್ನನ್ನು ಅಪಹರಿಸಿ ಅತ್ಯಾಚಾರ ವೆಸಗಿದ್ದಾನೆ ಎಂದು ಹೇಳಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೂಲ್ಕಿ ಪೊಲೀಸ್ ಇನ್ ಸ್ಪೆಕ್ಟರ್ ಮಂಜುನಾಥ್ ಅವರು ಆರೋಪಿ ಪ್ರೀತಮ್ ವಿರುದ್ದ ಪೋಕ್ಸೋ ಪ್ರಕರಣ ದಾಖಲಿಸಿ ತನೊಖೆಯನ್ನು ಚುರುಕುಗೊಳಿಸಿದ್ದಾರೆ.