ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ವಿಧಿವಶ
Monday, May 12, 2025
ಉಡುಪಿ : ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್, ಕಿರುತೆರೆ ಮತ್ತು ಚಲನಚಿತ್ರ ನಟ ರಾಕೇಶ್ ಪೂಜಾರಿ(33) ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಿನ್ನೆ (ಮೇ.11) ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.
ಮೂಲತಃ ಉಡುಪಿ ನಿವಾಸಿಯಾಗಿರುವ ರಾಕೇಶ್ ಪೂಜಾರಿ, ನಿನ್ನೆ ಕಾರ್ಕಳ ಸಮೀಪದ ಮೆಹಂದಿ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ನಿಧನರಾಗಿದ್ದಾರೆ.ನಟ ರಾಕೇಶ್ ಪೂಜಾರಿ ಪ್ರಸ್ತುತ ಹಿಟ್ಲರ್ ಕಲ್ಯಾಣ ಸೇರಿದಂತೆ ಸಿನಿಮಾಗಳು, ಧಾರಾವಾಹಿಗಳಲ್ಲಿ ಕಾಮಿಡಿ ರೋಲ್‌ನಲ್ಲಿ ಕಾಣಿಸಿಕೊಂಡಿದ್ದರು.