ಬಜಪೆಯ ಪ್ರಸಿದ್ದ ವೈದ್ಯ ಡಾ.ಜಯರಾಮ ಶೆಟ್ಟಿ ನಿಧನ
Wednesday, June 18, 2025
ಬಜಪೆ:ಇಲ್ಲಿನ ಪ್ರಸಿದ್ದ ವೈದ್ಯ ಡಾ.ಜಯರಾಮ ಶೆಟ್ಟಿ(76) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾದರು.ಅವರಿಗೆ ಪತ್ನಿ,ಇಬ್ಬರು ಪುತ್ರಿಯರು ಇದ್ದಾರೆ. ಬಜಪೆಯಲ್ಲಿ 50 ವರ್ಷಗಳಿಂದ ವೈದ್ಯಕೀಯ ಸೇವೆಯನ್ನು ಮಾಡುತ್ತ ಪ್ರಸಿದ್ದಿಯನ್ನು ಪಡೆದಿದ್ದರು.ಜನರಲ್ ಮೆಡಿಸಿನ್ ಜೊತೆಗೆ ಬಜಪೆ ಪರಿಸರದ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಮಕ್ಕಳ ತಜ್ಞರಾಗಿ ಗುರುತಿಸಿಕೊಂಡಿದ್ದರು.
ಪೊರ್ಕೋಡಿ ಶ್ರೀಸೋಮನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ,ನಿಂಜೂರು ಕೊಡಮಂತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರರಾಗಿ,ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ,ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ವೈದ್ಯಕೀಯ ಸಲಹೆಗಾರರಾಗಿ,ಲಯನ್ಸ್ ಕ್ಲಬ್ ನ ಜಿಲ್ಲಾ ಗವರ್ನರ್ ಆಗಿ ಸೇವೆ ಹಾಗೂ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು. ಡಾ.ಜಯರಾಮ ಶೆಟ್ಟಿಯವರ ಪಾರ್ಥಿವ ಶರೀರವನ್ನು ಬಜಪೆಯ ಅವರ ನಿವಾಸದಲ್ಲಿ ಇಡಲಾಗಿದ್ದು,ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ,ಮಾಜಿ ಸಚಿವ ಅಭಯಚಂದ್ರ ಜೈನ್ ಸಹಿತ ಗಣ್ಯಾತೀಗಣ್ಯರು ಅಂತಿಮ ನಮನ ಸಲ್ಲಿಸಿದರು.ಜೂ.18 ರಂದು ಹುಟ್ಟೂರು ಕಾರ್ಕಳದ ನಿಂಜೂರಿನಲ್ಲಿ ಅಂತ್ಯಸಂಸ್ಕಾರ ನಡೆಯಿತು.