ನಂದಿನಿ ನದಿಗೆ ಕಲುಷಿತ ನೀರು ,ಸಚಿವರಿಂದ ಪರಿಶೀಲನೆ
Monday, June 9, 2025
ಚೇಳಾರು ಖಂಡೇವು ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ,ಮಾಜಿ ಸಚಿವ ಕೆ ಅಭಯ ಚಂದ್ರ ಜೈನ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಯವರು ಭೇಟಿ ನೀಡಿ, ನದಿತಟ ಕಲುಷಿತ ನೀರು ನಂದಿನಿ ನದಿ ಸೇರುವ ಸಮಸ್ಯೆಯ ಕುರಿತು ಸ್ಥಳ ಪರಿಶೀಲನೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹಾಗೂ ಸ್ಥಳೀಯ ನಾಯಕರೊಂದಿಗೆ ಮಾತುಕತೆ ನಡೆಸಿದರು.