ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ದಂಡ - ಮಂಗಳೂರು ಪೊಲೀಸ್ ಕಮೀಷನರ್
Friday, June 20, 2025
ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮಧ್ಯ ಸೇವನೆ ಮಾಡಿ ಅತೀವೇಗದಲ್ಲಿ ವಾಹನ ಚಾಲನೆ ಮಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿದ್ದು,ಮದ್ಯಪಾನ ಮಾಡಿ ವಾಹನಗಳನ್ನು ಚಲಾಯಿಸುವವರ ಮೇಲೆ ದಂಡ ವಿಧಿಸಲಾಗುವುದು ಎಂದು ಮಂಗಳೂರು ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಸಾರ್ವಜನಿಕರಿಗೆ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.
ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದಲ್ಲಿ ರಸ್ತೆ ಅಪಘಾತ ಉಂಟಾಗಿ ಚಾಲಕ, ಪ್ರಯಾಣಿಕರು ಸಾವು ನೋವುಗಳನ್ನು ಅನುಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಇದರ ಪರಿಣಾಮ ಕುಟುಂಬ ಮತ್ತು ಅವಲಂಭಿತರ ಮೇಲೆ ಪ್ರಭಾವ ಬಿದ್ದು ದುಖಃ ಅನುಭವಿಸುತ್ತಾರೆ. ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದಲ್ಲಿ ಭಾರತೀಯ ಮೋಟಾರು ವಾಹನ ಕಾಯಿದೆ ಕಲಂ 185 ಅನ್ವಯ ಪ್ರಕರಣ ದಾಖಲಿಸಿ ರೂ 10,000/- ವರೆಗೆ ದಂಡ ಪಾವತಿಸಬೇಕಾಗುತ್ತದೆ.ಅತೀವೇಗದಿಂದ (Over Speed) ವಾಹನ ಚಲಾಯಿಸಿದಲ್ಲಿ ರಸ್ತೆ ಅಪಘಾತ ಉಂಟಾಗಿ ಚಾಲಕ, ಪ್ರಯಾಣಿಕರು ಮತ್ತು ಕುಟುಂಬಸ್ಥರು ಸಾವು ನೋವುಗಳನ್ನು ಅನುಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಅತೀವೇಗದಿಂದ (Over Speed) ವಾಹನ ಚಲಾಯಿಸಿದಲ್ಲಿ ಭಾರತೀಯ ಮೋಟಾರು ವಾಹನ ಕಾಯಿದೆ ಕಲಂ 183 ಅನ್ವಯ ಪ್ರಕರಣ ದಾಖಲಿಸಿ 2/3/LMV- ವಾಹನಗಳಿಗೆ ರೂ 1,000/-, HMV/HGV/OTHERS- ವಾಹನಗಳಿಗೆ 2,000/- ವರೆಗೆ ದಂಡ ಪಾವತಿಸಬೇಕಾಗುತ್ತದೆ.ಅದುದರಿಂದ ಮಧ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡಬಾರದು ಹಾಗೂ ಅತೀವೇಗದಿಂದ (Over Speed) ವಾಹನ ಚಾಲನೆ ಮಾಡದೇ ಎಚ್ಚರದಿಂದ ವಾಹನ ಚಾಲನೆ ಮಾಡುವಂತೆ ಮಂಗಳೂರು ಪೊಲೀಸ್ ಕಮೀಷನರ್ ಅವರು ಸಾರ್ವಜನಿಕರಿಗೆ ಈ ಮೂಲಕ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.