Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್‌.ವಿ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಸಾಲಿನ ಐಎಎಸ್ ಅಧಿಕಾರಿ ದರ್ಶನ್ ಎಚ್‌.ವಿ ಅವರನ್ನು ನೇಮಕ ಮಾಡಲಾಗಿದೆ. ಇದರೊಂದಿಗೆ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲೈ ಮುಗಿಲನ್ ಅವರನ್ನು ದಿಢೀ‌ರ್ ಆಗಿ ವರ್ಗಾಯಿಸಿದ್ದು, ಬೆಂಗಳೂರಿನಲ್ಲಿ ನೋಂದಣಿ ಇಲಾಖೆಯ ಐಜಿ ಮತ್ತು ಸ್ಟಾಂಪ್ಸ್ ವಿಭಾಗದ ಕಮಿಷನ‌ರ್ ಆಗಿ ಹೊಸ ಹುದ್ದೆ ನೀಡಲಾಗಿದೆ.

ದರ್ಶನ್ ಎಚ್‌.ವಿ ಅವರು ಬೆಂಗಳೂರಿನಲ್ಲಿ ಕಮರ್ಶಿಯಲ್ ಟ್ಯಾಕ್ಸ್ ವಿಭಾಗದ ಎಡಿಷನಲ್ ಕಮಿಷನ‌ರ್ ಹುದ್ದೆಯಲ್ಲಿದ್ದರು. ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಅವರನ್ನೂ ವರ್ಗಾವಣೆ ಮಾಡಲಾಗಿದ್ದು, ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರಾಗಿ ಹುದ್ದೆ ನೀಡಲಾಗಿದೆ.