Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್‌ ದಾಸ್ ಅಗರ್ವಾಲ್ ಭೇಟಿ

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್‌ ದಾಸ್ ಅಗರ್ವಾಲ್ ಅವರು ಬುಧವಾರದಂದು ಸಂಜೆ  ಭೇಟಿ ನೀಡಿದರು. ಕಟೀಲು ದೇವಳದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ  ಅವರು ದೇವರ ಶೇಷ ವಸ್ತ್ರ, ಪ್ರಸಾದ ನೀಡಿ ಅವರನ್ನು ಗೌರವಿಸಿದರು.

ಈ ಸಂದರ್ಭ ಕಟೀಲು ದೇವಳದ ಅನುವಂಶಿಕ ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ, ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಉಮಾನಾಥ ಕೋಟ್ಯಾನ್, ಭಾಗಿರಥಿ ಮುರುಳ್ಯ, ಹರೀಶ್ ಪೂಂಜ, ವಿಧಾನ ಪರಿಷ್ಯತ್‌ ಸದಸ್ಯ ಕಿಶೋ‌ರ್ ಕುಮಾರ್, ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಈಶ್ವರ್ ಕಟೀಲ್‌, ಭುವನಾಭಿರಾಮ ಉಡುಪ, ಗುತ್ತಿನಾರ್ ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಅಭಿಲಾಷ್ ಶೆಟ್ಟಿ ಕಟೀಲ್‌, ಮಾಹಾಬಲ ಮಾರ್ಲ, ಸುನೀಲ್ ಅಳ್ವ, ಲೋಕಯ್ಯ ಸಾಲಿಯಾನ್ ಕೊಂಡೇಲ, ಸತೀಶ್ ಶೆಟ್ಟಿ ಎಕ್ಕಾರ್, ಗುರುರಾಜ್ ಮಲ್ಲಿಗೆಯಂಗಡಿ, ಪ್ರವೀಣ್ ಕಟೀಲ್‌, ಯತೀಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.