ಕಿಲೆಂಜಾರು ಅರಮನೆ ಸರ್ಕಾರಿ ಪ್ರೌಢಶಾಲೆ, ವನಮಹೋತ್ಸವ ಕಾರ್ಯಕ್ರಮ
ಕೈಕಂಬ:ಪರಿಸರವನ್ನು ಉಳಿಸಿ ಬೆಳೆಸಲು ನಾವೆಲ್ಲರೂ ಪರಿಸರ ಸೇನಾನಿಗಳಾಗಬೇಕು ಎಂದು ಪ್ರಗತಿಪರ ಕೃಷಿಕ ಹಾಗೂ ಹಸಿರು ಸೇನೆ ಸಂಘಟನೆಯ ಮುಖಂಡ ಮನೋಹರ ಶೆಟ್ಟಿ ಹೇಳಿದರು.ಅವರು ನೇಸರ ಇಕೋ ಕ್ಲಬ್ ವತಿಯಿಂದ ಕಿಲೆಂಜಾರು ಅರಮನೆ ಸರ್ಕಾರಿ ಪ್ರೌಢಶಾಲೆ ಕುಪ್ಪೆಪದವು ಇಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಗಿಡವನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.