ಶ್ರೀಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ,ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ
Wednesday, June 11, 2025
ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ (ರಿ.) ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮೂಲ್ಕಿ ವಲಯದ ಮೆಡ್ಲಿನ್ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿ ಕೊಂಡಿದ್ದು ,ಕಾರ್ಯಕ್ರಮವನ್ನು ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತುಳು ಸಾಹಿತ್ಯ ಅಕಾಡಮಿ ಯ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಮೂಲ್ಕಿ ಪೊಲೀಸ್ ಠಾಣಾಧಿಕಾರಿ ಯಶವಂತ್ ,ಮುಲ್ಕಿ ಜನ ಜಾಗೃತಿ ವೇದಿಕೆ ಅಧ್ಯಕ್ಷ ವಿನೋದ್ ಸಾಲಿಯಾನ್,ಮುಲ್ಕಿ ವಲಯದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಮೂಲ್ಕಿ ಒಕ್ಕೂಟದ ಅಧ್ಯಕ್ಷೆ ಜಯಲಕ್ಷ್ಮಿ , ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಯೋಜನಾಧಿಕಾರಿ ಗಿರೀಶ್ ಎಮ್ ,ಮೇಲ್ವಿಚಾರಕಿ ನಿಶ್ಮಿತಾ ಶೆಟ್ಟಿ,ಸೇವಾ ಪ್ರತಿನಿಧಿ ರಾಜೀವ, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.