-->
ಪಕ್ಷ ಸಂಘಟನೆ ಜೊತೆಗೆ ಸಾಮಾಜಿಕ ಕಳಕಳಿಯು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಇರಲಿ  - ಮಿಥುನ್ ಎಂ ರೈ

ಪಕ್ಷ ಸಂಘಟನೆ ಜೊತೆಗೆ ಸಾಮಾಜಿಕ ಕಳಕಳಿಯು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಇರಲಿ - ಮಿಥುನ್ ಎಂ ರೈ

ಮೂಲ್ಕಿ:ಪಕ್ಷ ಸಂಘಟನೆ, ಪಕ್ಷದ ಕೆಲಸ ಕಾರ್ಯಗಳು ಮಾಡುವುದರೊಂದಿಗೆ ಸಮಾಜದಲ್ಲಿ ಸಾಧನೆಗೈದ ವ್ಯಕ್ತಿಗಳನ್ನು ಗುರುತಿಸುವುದು ಅವರನ್ನು ಗೌರವಿಸುವುದು ನಮ್ಮೆಲ್ಲರ ಆಧ್ಯ ಕರ್ತವ್ಯ. ಇದಕ್ಕೆ ಪೂರಕವಾಗಿ ಇಂದು ಗರಿಷ್ಠ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸುತ್ತಿದ್ದೇವೆ ಇದರೊಂದಿಗೆ ಸಾಮಾಜಿಕ ಸೇವೆ ಗಳನ್ನು ನಿರಂತರವಾಗಿ ಮಾಡುತ್ತಿರುವ ಹಿರಿಯ ಕಾಂಗ್ರೆಸ್ಗರನ್ನು ಗುರುತಿಸುವ ಕಾರ್ಯ ಕೂಡ ಮಾಡುತ್ತಿದ್ದೇವೆ ಇವರಿಗೆ ಶುಭವಾಗಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ ರೈ  ಹೇಳಿದರು. ಅವರು ಮುಲ್ಕಿ ಬ್ಲಾಕ್ ಕಾಂಗ್ರೆಸ್ನ ಮಾಸಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಮಾಸಿಕ ಸಭೆಯ  ಅಧ್ಯಕ್ಷತೆಯನ್ನು   ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ವಹಿಸಿದ್ದರು.
ಕೆಪಿಸಿಸಿ ಸದಸ್ಯರಾದ ಎಚ್ ವಸಂತ ಬರ್ನಾಡ್ ಬೂತ್ ಸಮಿತಿಗಳ ಅವಲೋಕನ ನಡೆಸಿದರು.

ಜಿಲ್ಲಾ ಕಾಂಗ್ರೆಸ್ ಸದಸ್ಯ ಮೋನಪ್ಪ ಶೆಟ್ಟಿ ಎಕ್ಕಾರು, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ  ಹಸನಬ್ಬ ಬಾಳ, ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯ ಸುಬ್ರಮಣ್ಯ ಭಟ್ , ಪಂಚಾಯತ್  ಅಧ್ಯಕ್ಷ ಶ್ರೀಮತಿ  ಗೀತಾ ಶೆಟ್ಟಿ, ಯುವ ಕಾಂಗ್ರೆಸ್ ನಾಯಕ ಜಾಕ್ಸನ್ ಸಲ್ದಾನ, ಎನ್ ಎಸ್ ಯು ಐ ಅಧ್ಯಕ್ಷ ನಿಶಾಂತ್ ಪೂಜಾರಿ ಮೊದಲಾದರು ಇದ್ದರು.

ಮುಂಬರುವ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಮತ್ತು ಸ್ಥಳೀಯ ಆಡಳಿತದ ಚುನಾವಣೆಗಳ ಕುರಿತು ಚರ್ಚೆ ನಡೆಸಲಾಯಿತು
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ