
ಜೂ. 29: ಸುರತ್ಕಲ್ ಬಂಟರ ಸಂಘದ 25 ನೇ ವಾರ್ಷಿಕ ಮಹಾಸಭೆ, ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ
Thursday, June 26, 2025
ಸುರತ್ಕಲ್ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಂಟರ ಸಂಘ (ರಿ) ಸುರತ್ಕಲ್ ಇದರ 25 ನೇ ವಾರ್ಷಿಕ ಮಹಾಸಭೆ, ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಜೂ. 29 ರಂದು ಭಾನುವಾರ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 9.30 ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, 10.30 ಕ್ಕೆ 25 ನೇ ವಾರ್ಷಿಕ ಮಹಾಸಭೆ ನಡೆಯಲಿದೆ. ಸಂಜೆ 5 ಗಂಟೆಗೆ ಅಭಿನಂದನೆ ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ವಹಿಸಲಿದ್ದಾರೆ. ಮುಂಬೈ ವಿ ಕೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಂಬೈ ಹೇರಂಭ ಇಂಡಸ್ಟ್ರೀಸ್ ನ ಆಡಳಿತ ನಿರ್ದೇಶಕ ಡಾ ಕನ್ಯಾನ ಸದಾಶಿವ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಪೂನಾ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಶೆಟ್ಟಿ, ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ, ಬೆಂಗಳೂರು ಪೊಲೀಸ್ ಉಪಾಧೀಕ್ಷರು ದಿನಕರ ಶೆಟ್ಟಿ ಪಡ್ರೆ, ಸಮಾಜ ಸೇವಕಿ ಮಲ್ಲಿಕಾ ಯಶವಂತ ಶೆಟ್ಟಿ ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಅಭಿನಂದನೆ, ದತ್ತಿನಿಧಿ, ವಿದ್ಯಾರ್ಥಿ ವೇತನ ವಿತರಣೆ, ಸಹಾಯ ಹಸ್ತ, ನಿರಂತರ ವಿದ್ಯಾರ್ಥಿ ವೇತನ ವಿತರಣೆ, ನಡೆಯಲಿದೆ.
ಮಧ್ಯಾಹ್ನ 1 ಗಂಟೆಗೆ ಗ್ರಾಮವಾರು ಸಾಂಸ್ಕೃತಿಕ ಸ್ಪರ್ಧೆ ಜರಗಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ತಿಳಿಸಿದ್ದಾರೆ.