-->
ಯೋಗವು ಮಾನಸಿಕ ಹಾಗೂ ದೈಹಿಕ ಸಮತೋಲನವನ್ನು ಕಾಯ್ದುಕೊಳ್ಳುತ್ತದೆ - ಭಾಸ್ಕರ್ ಅಮೀನ್

ಯೋಗವು ಮಾನಸಿಕ ಹಾಗೂ ದೈಹಿಕ ಸಮತೋಲನವನ್ನು ಕಾಯ್ದುಕೊಳ್ಳುತ್ತದೆ - ಭಾಸ್ಕರ್ ಅಮೀನ್

ತೋಕೂರು:ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಹಳೆಯಂಗಡಿ ಇದರ ನೇತೃತ್ವದಲ್ಲಿ ಭಾರತ ಸರಕಾರದ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ ಭಾರತ್ ದಕ್ಷಿಣ ಕನ್ನಡ, ಕರ್ನಾಟಕ, ರೋಟರಿ ಕ್ಲಬ್ ಬೈಕಂಪಾಡಿ,  ಇದರ ಸಹಯೋಗದೊಂದಿಗೆ  ಅಂತರಾಷ್ಟ್ರೀಯ ಯೋಗ ದಿನಾಚರಣೆಯು  ಸಂಸ್ಥೆಯ ಕಾರ್ಯಾಲಯದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷ ಸಂಪತ್ ಜೆ. ಶೆಟ್ಟಿಯವರು ವಹಿಸಿ ದೀಪ ಪ್ರಜ್ವಲನೆಗೊಳಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. 
ಕಾರ್ಯಕ್ರಮದಲ್ಲಿ ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಇದರ ಪ್ರಧಾನ ಕಾರ್ಯದರ್ಶಿ ಹಾಗೂ ಫೇಮಸ್ ಯೂತ್ ಕ್ಲಬ್ಬಿನ ನಿಕಟ ಪೂರ್ವ ಅಧ್ಯಕ್ಷ ಭಾಸ್ಕರ್ ಅಮೀನ್ ತೋಕೂರು  ಮಾತನಾಡಿ  ಇಂದಿನ ಒತ್ತಡದ ಬದುಕಿನಲ್ಲಿ ಯೋಗವು ಮಾನಸಿಕ ಮತ್ತು ದೈಹಿಕ ಸಮತೋಲನವನ್ನು ಕಾಯ್ದುಕೊಳ್ಳುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಫೇಮಸ್ ಯೂತ್ ಕ್ಲಬ್ ನ ಉಪಾಧ್ಯಕ್ಷ  ಮಹಮ್ಮದ್ ಶರೀಫ್, ಕಾರ್ಯದರ್ಶಿ ಮೋಹನ್ ದಾಸ್ ದೇವಾಡಿಗ, ಮಹಿಳಾ ಮಂಡಲದ ಅಧ್ಯಕ್ಷೆ  ಶ್ರೀಮತಿ ಪ್ರೇಮಲತಾ ಯೋಗೀಶ್ , ಸದಸ್ಯರಾದ ನಮಿತಾ ನವೀನ್ ಚಂದ್ರ, ರೇಷ್ಮಾ ಮೋಹನ್ ದಾಸ್, ಅರ್ಚನಾ ಹಾಗೂ ಮನೋರಮ  ಉಪಸ್ಥಿತರಿದ್ದರು.  

 ಕ್ಲಬ್ ನ ಅಧ್ಯಕ್ಷ  ಸಂಪತ್ ಜೆ ಶೆಟ್ಟಿ ಸ್ವಾಗತಿಸಿದರು.  ಕಾರ್ಯದರ್ಶಿ ಮೋಹನ್ ದಾಸ್ ದೇವಾಡಿಗ ಕಾರ್ಯಕ್ರಮ  ನಿರೂಪಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ