ಎಕ್ಕಾರು ಶಾಲಾ ಖೋ ಖೋ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ
Tuesday, July 1, 2025
ಬಜಪೆ:ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರು ಇಲ್ಲಿನ ಬಾಲಕಿಯರ ಖೋ ಖೊ ತಂಡವು ತುಮಕೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಎಚ್ ಸಿ ಎಲ್ ಫೌಂಡೇಶನ್ ವತಿಯಿಂದ ಸ್ಪೋರ್ಟ್ಸ್ ಫಾರ್ ಚೇಂಜ್ ಏಳನೇ ಆವೃತ್ತಿಯ ದಕ್ಷಿಣ ಭಾರತ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ಲಕ್ನೊ ದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿದೆ.
ಲೀಗ್ ಕಮ್ ನಾಕ್ ಔಟ್ ಹಂತದಲ್ಲಿ ಕೇರಳ ತಂಡವನ್ನು ಒಂದು ಇನ್ನಿಂಗ್ಸ್ ಅಂತರದಲ್ಲಿ ಸೋಲಿಸಿ, ತೆಲಂಗಾಣ ತಂಡವನ್ನು 5 ಅಂಕಗಳ ಅಂತರದಲ್ಲಿ ಸೋಲಿಸಿ, ಆಂಧ್ರಪ್ರದೇಶದ ತಂಡವನ್ನು ಒಂದು ಇನ್ನಿಂಗ್ಸ್ ಅಂತರದಲ್ಲಿ ಸೋಲಿಸಿ ಫೈನಲ್ ಪ್ರವೇಶಿಸಿತ್ತು. ಫೈನಲ್ ಪಂದ್ಯಾಟದಲ್ಲಿ ತಮಿಳುನಾಡು ವಿರುದ್ಧ 4 ಅಂಕ ಅಂತರದ ಜಯ ಪಡೆದು ಪ್ರಥಮ ಸ್ಥಾನದೊಂದಿಗೆ ಲಕ್ನೋ ದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಪ್ರವೇಶಿಸಲು ಅರ್ಹತೆ ಪಡೆಯಿತು. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವಿದ್ಯಾಲತಾ ಇವರು ತರಬೇತಿಯನ್ನು ನೀಡಿರುತ್ತಾರೆ.