-->
ಬಹುಮುಖ ಪ್ರತಿಭೆ,ವಕೀಲೆ  ರಾಜಶ್ರೀ ಜೆ.ಪೂಜಾರಿ ನಿಧನ

ಬಹುಮುಖ ಪ್ರತಿಭೆ,ವಕೀಲೆ ರಾಜಶ್ರೀ ಜೆ.ಪೂಜಾರಿ ನಿಧನ

ಬಜಪೆ :ಬಹುಮುಖ ಪ್ರತಿಭೆ,ವಕೀಲೆ  ಮಂಗಳೂರು ತಾಲೂಕಿನ ಎಕ್ಕಾರು ನಿವಾಸಿಯಾಗಿರುವ ರಾಜಶ್ರೀ ಜೆ.ಪೂಜಾರಿ(25)ಅವರು ಅಲ್ಪಕಾಲದ ಅನಾರೋಗ್ಯದಿಂದ ಜು.25 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ  ನಿಧನರಾದರು.

ಬಂಟ್ವಾಳದಲ್ಲಿ ಜನಿಸಿ, ಅಲ್ಲಿಯೇ ತನ್ನ ಪ್ರಾಥಮಿಕ 4 ನೇ ತರಗತಿಯವರೆಗೆ ಶಿಕ್ಷಣವನ್ನು ಪಡೆದು, ಇವರು ನಂತರ ಪ್ರೌಢಶಾಲಾ ಶಿಕ್ಷಣದವರೆಗೆ ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರು ಇಲ್ಲಿ ಪಡೆದುಕೊಂಡು, ಪದವಿಪೂರ್ವ ಶಿಕ್ಷಣವನ್ನು 2017 ರಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿಪೂರ್ವ ಕಾಲೇಜು, ಕಟೀಲು ಇಲ್ಲಿ ಪಡೆದುಕೊಂಡು, ನಂತರ ತಮ್ಮ ಐದು ವರ್ಷದ ( 2017 - 2022 )  ಕಾನೂನು ಶಿಕ್ಷಣವನ್ನು ಮಂಗಳೂರಿನ ಪ್ರತಿಷ್ಠಿತ ಎಸ್ ಡಿ ಎಂ ಕಾನೂನು ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ. ಇದೀಗ ಎರಡು ವರ್ಷದಿಂದ ಮಂಗಳೂರಿನಲ್ಲಿ ವಕೀಲೆಯಾಗಿ ವೃತ್ತಿ ನಿರ್ವಹಿಸುತ್ತಿದ್ದಾರೆ.  ಇವರ ಕಿರಿಯ ಸಹೋದರ ಮನೋಜ್ ರವರು ಬೆಂಗಳೂರಿನಲ್ಲಿ ಎಸ್ - ವ್ಯಾಸ ಸ್ವಾಯತ್ತ ವಿಶ್ವವಿದ್ಯಾಲಯದಲ್ಲಿ ಕ್ಲಿನಿಕಲ್ ಮನೋವಿಜ್ಞಾನದಲ್ಲಿ ಎಂ.ಎಸ್ಸಿ ಸ್ನಾತಕೋತ್ತರ ಪದವಿಯನ್ನು ಅಧ್ಯಯನ ಮಾಡುತ್ತಿದ್ದಾರೆ. 

 ಹವ್ಯಾಸದಲ್ಲಿ  ಕವಯಿತ್ರಿ, ಬರಹಗಾರ್ತಿ, ಲೇಖಕಿ, ಯುವಸಾಹಿತಿ, ವಾಗ್ಮಿ, ನಿರೂಪಕಿ, ಕಥಾವಾಚಕಿ,  ಹಿನ್ನೆಲೆ ಧ್ವನಿ ಕಲಾವಿದೆ, ಯೋಗಪಟು,  ರಂಗಭೂಮಿ ಕಲಾವಿದೆ, ಹವ್ಯಾಸಿ ಪ್ರವಾಸಿ, ಪುಸ್ತಕ ಪ್ರೇಮಿಯಾಗಿ ಹೀಗೆ ಹತ್ತು ಹಲವು ವಿಭಿನ್ನ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ವೃತ್ತಿಯಲ್ಲಿ ವಕೀಲೆಯಾಗಿರುವ ಸಾಹಿತ್ಯ ಮತ್ತು ಇತರೆ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡಿಕೊಂಡು ಬರುತ್ತಿರುವವರು ರಾಜಶ್ರೀ.

ರಾಜಶ್ರೀ ಅವರು ಬರೆದ ಅನೇಕ ಕತೆ, ಕವಿತೆ, ಲೇಖನ, ವ್ಯಕ್ತಿ ಪರಿಚಯ, ಪ್ರಬಂಧಗಳು ಇತ್ಯಾದಿ ಉದಯವಾಣಿ, ವಿಜಯವಾಣಿ, ಜಯಕಿರಣ, ವಿಶ್ವವಾಣಿ, ತುಳುನಾಡು ವಾರ್ತೆ, ಪ್ರಜಾವಾಣಿ ಹೀಗೆ ನಾಡಿನ ಅನೇಕ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.
ಅವರು ತಂದೆ,ತಾಯಿ ಹಾಗೂ ಓರ್ವ ಕಿರಿಯ ಸಹೋದರ ಹಾಗೂ ಬಂಧು ಬಳಗದವರನ್ನು ಆಗಲಿದ್ದಾರೆ.ನಿಧನಕ್ಕೆ ಅನೇಕ ಗಣ್ಯಾತೀಗಣ್ಯರು ಕಂಬನಿ ಮಿಡಿದಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ