-->
ಸಂತ ಜೋಸೆಫರ ಪದವಿ ಪೂರ್ವ ಕಾಲೇಜು, ಬಜ್ಪೆ, ವಿವಿಧ ಸಂಘಗಳ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಸಂತ ಜೋಸೆಫರ ಪದವಿ ಪೂರ್ವ ಕಾಲೇಜು, ಬಜ್ಪೆ, ವಿವಿಧ ಸಂಘಗಳ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಜಪೆ:ಸಂತ ಜೋಸೆಫರ ಪದವಿ ಪೂರ್ವ ಕಾಲೇಜು, ಬಜ್ಪೆ, ಇಲ್ಲಿನ ಪ್ರೌಢಶಾಲಾ ವಿಭಾಗದಲ್ಲಿ 2025 - 26ನೇ ಶೈಕ್ಷಣಿಕ ಸಾಲಿನ ವಿವಿಧ ಸಂಘಗಳ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭವು  ನಡೆಯಿತು. ಸಂಸ್ಥೆಯ ಮುಖ್ಯೋಪಾಧ್ಯಾಯ  ಆಲ್ವಿನ್ ನೋರೋನ್ಹ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿ ,ವಿದ್ಯಾರ್ಥಿಗಳು ಎಳವೆಯಲ್ಲೇ ನಾಯಕತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿ ಸಮಾಜದ ಸತ್ಪ್ರಜೆ ಯಾಗಬೇಕೆಂದು  ಹೇಳಿದರು.ನಂತರ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಶಾಲಾ ನಾಯಕಿಯಾಗಿ ಆಡ್ರಿಲ್ ಆನ್ ಸಿಕ್ವೇರಾ, ಉಪನಾಯಕನಾಗಿ ಕೃಥಿನ್  ಆರ್ ಶೇಣವ ಹಾಗೂ ಇತರ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು. 
ಹಿರಿಯ ಶಿಕ್ಷಕಿ ಶ್ರೀಮತಿ ಶಿಲ್ಪಾ ಡಿ'ಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ದಿಶಾ ರೊಡ್ರಿಗಸ್ ಸ್ವಾಗತಿಸಿ, ತನಿಶ್  ಸಿ.ಪೂಜಾರಿ ಧನ್ಯವಾದ ವಿತ್ತರು. ಮತದಾರರ ಸಾಕ್ಷರತಾ ಸಂಘದ ಸಂಯೋಜಕ  ಅಶ್ವಥ್ ನಿಡ್ಡೋಡಿ ಕಾರ್ಯಕ್ರಮ ಸಂಯೋಜಿಸಿದರು. ವಿದ್ಯಾರ್ಥಿನಿ ಚವಿ ಸಿಂಗ್ ಕಾರ್ಯಕ್ರಮ ನಿರೂಪಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ