ಮಳೆ ಅನಾಹುತ,ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪರಿಶೀಲನೆ
Thursday, July 17, 2025
ಮಂಗಳೂರು : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಪಚ್ಚನಾಡಿ ಶಿವಾಜಿನಗರ ಪ್ರದೇಶದ ಸುಜಾತ ಅವರ ಮನೆ ಸಂಪೂರ್ಣ ಹಾನಿಗೊಂಡಿದ್ದು ಸ್ಥಳಕ್ಕೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ನಿರಾಶ್ರೀತ ಸುಜಾತಾ ಅವರ ಕುಟುಂಬಕ್ಕೆ ಶಾಸಕರು ತಮ್ಮ ವೈಯುಕ್ತಿಕ ನೆಲೆಯಲ್ಲಿ ಬಾಡಿಗೆ ಮನೆಯ ವ್ಯವಸ್ಥೆ ಮಾಡಿಸಿ ಆಶ್ರಯ ಕಲ್ಪಿಸಿದರು. ಅದೇ ರೀತಿ ಶೀಘ್ರದಲ್ಲಿ ಸಮಸ್ಯೆ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.