-->
ವ್ಯಕ್ತಿ ನಾಪತ್ತೆ

ವ್ಯಕ್ತಿ ನಾಪತ್ತೆ


ಮಂಗಳೂರು :ಕಟೀಲು ಕೊಂಡೆಮೂಲ ನರ್ತಿಕಲ್ಲು ನಿವಾಸಿ ವಿಶ್ವನಾಥ (56) ಅವರು ಮನೆಯಿಂದ ಬಜಪೆಗೆ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದಾರೆ.

ಜು. 4ರಂದು ಬೆಳಗ್ಗೆ 8.30ಕ್ಕೆ ಮನೆಯಿಂದ ಹೋಗಿದ್ದು, ಮಧ್ಯಾಹ್ನ 2 ಗಂಟೆಗೆ ಪತ್ನಿ ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ಬಳಿಕ ಎಲ್ಲ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಸುಮಾರು 5 ಅಡಿ ಎತ್ತರ, ಗೋಧಿ ಮೈ ಬಣ್ಣದ ಅವರು ತುಳು ಭಾಷೆ ಬಲ್ಲವರಾಗಿದ್ದು, ಮನೆಯಿಂದ ಹೊರಡುವಾಗ ಬಿಳಿ ಬಣ್ಣದ ಅರ್ಧ ತೋಳಿನ ಅಂಗಿ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. ಈ ಚಹರೆಯ ವ್ಯಕ್ತಿಯ ಮಾಹಿತಿ ಇದ್ದಲ್ಲಿ ಬಜಪೆ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ