ಪೆರ್ಮಂಕಿ :ವಿಪರೀತ ಮಳೆಯಿಂದಾಗಿ ರಸ್ತೆ ಜರಿದು ಬಿದ್ದು ಜನ ಸಂಚಾರ ಕಡಿತ,ಶಾಸಕರಿಂದ ಪರಿಶೀಲನೆ
Wednesday, July 30, 2025
ಗುರುಪುರ:ಉಳಾಯಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಮಂಕಿ ಪರಿಸರದಲ್ಲಿ, ಇತ್ತೀಚಿಗೆ ಸುರಿದ ವಿಪರೀತ ಮಳೆಯಿಂದಾಗಿ ರಸ್ತೆ ಜರಿದು ಬಿದ್ದು ಜನ ಸಂಚಾರ ಕಡಿತಗೊಂಡಿತ್ತು. ಸ್ಥಳಕ್ಕೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ಸಮಸ್ಯೆಯ ಕುರಿತು ಪಂಚಾಯತ್ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ, ಶೀಘ್ರವಾಗಿ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು.