ಕಟೀಲು ದೇವಳಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ
Wednesday, July 16, 2025
ಕಟೀಲು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಬುಧವಾರದಂದು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.
ಜನಾರ್ದನ ರೆಡ್ಡಿ ಅವರ ಪುತ್ರ ಗಾಲಿ ಕಿರೀಟಿ ರೆಡ್ಡಿ ತೆಲುಗು ನಟಿ ಶ್ರೀಲೀಲಾ ಅವರೊಂದಿಗೆ ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ದ್ವಿಭಾಷಾ ಚಿತ್ರ'ಜೂನಿಯರ್' ಜುಲೈ 18 ರಂದು ಬಿಡುಗಡೆಯಾಗಲಿದ್ದು ಈ ಹಿನ್ನಲೆಯಲ್ಲಿ ಪ್ರಾರ್ಥಿಸಲು ಕಟೀಲು ದೇಗುಲಕ್ಕೆ ಭೇಟಿ ನೀಡಿದರು.
ದೇವಸ್ಥಾನದ ಅರ್ಚಕ ಅನಂತ ಆಸ್ರಣ್ಣ ಹಾಗೂ ಹರಿನಾರಾಯಣ ದಾಸ ಆಸ್ರಣ್ಣ ಅವರು ಪ್ರಸಾದ ನೀಡಿದರು.ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ ಹಾಗೂ ಮತ್ತಿತರರು ಇದ್ದರು.