ಕಟೀಲು ಪ್ರಥಮ ದರ್ಜೆ ಕಾಲೇಜಿನಲ್ಲಿ “ಓರಿಯೆಂಟೇಶನ್” ಕಾರ್ಯಕ್ರಮ
Monday, July 28, 2025
ಕಟೀಲು:ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26 ನೇ ಸಾಲಿನ ಪ್ರಥಮ ಬಿ.ಕಾಂ. ತರಗತಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮವು ಕಾಲೇಜಿನ ವಾಗ್ದೇವಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲ ಡಾ. ವಿಜಯ ವಿ. ಅವರು ಕಾಲೇಜಿನ ನಿಯಮಗಳು, ವಿದ್ಯಾಸಂಸ್ಥೆಯಲ್ಲಿ ಸಿಗುವ ಸವಲತ್ತುಗಳು, ಪಠ್ಯಕ್ರಮ ಮತ್ತು ಪಠ್ಯೇತರ ಚಟುವಟಿಕೆಗಳ ಜೊತೆಗೆ ಎಲ್ಲಾ ಉಪನ್ಯಾಸಕರು ಮತ್ತು ಉಪನ್ಯಾಸಕೇತರ ಸಿಬ್ಬಂದಿಗಳನ್ನು ಪರಿಚಯಿಸಿ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭ ಐಕ್ಯೂಎಸಿ ಸಂಯೋಜಕ ಪ್ರದೀಪ್ ಡಿ.ಎಂ. ವಾಣಿಜ್ಯ ಉಪನ್ಯಾಸಕ ಪೂಜಾ ಯು. ಕಾಂಚನ್, ಕಾಲೇಜಿನ ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.