ಬಾಲಕಿಗೆ ಲೈಂಗಿಕ ಕಿರುಕುಳ ಉದ್ಯಮಿ ರಾಕಿ ಪಿಂಟೋ ಬಂಧನ
Sunday, July 13, 2025
ಕಿನ್ನಿಗೋಳಿ : ಕಿನ್ನಿಗೋಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಿನ್ನಿಗೋಳಿಯ ಪಿಂಟೋ ಗಾರ್ಡನ್ ಮಾಲೀಕ ಉದ್ಯಮಿ ರಾಕೀ ಪಿಂಟೋ (68) ಅವರ ಮೇಲೆ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆ ಕೆಲಸ ಮಾಡಿಕೊಂಡಿದ್ದ ಬಾಲಕಿಯ ತಾಯಿ ಈ ಬಗ್ಗೆ ದೂರು ನೀಡಿದ್ದು, ಬಾಲಕಿಯನ್ನು ಶಾಲೆಗೆ ಬಿಡುವ ನೆಪದಲ್ಲಿ ಕಾರಿನಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸೆಗಿದ್ದಾರೆ ಎಂದು ತಾಯಿ ದೂರು ನೀಡಿದ ಹಿನ್ನಲೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಂತೆ ಕಾರಿನ ಸಹಿತ ರಾಕಿ ಪಿಂಟೋ ಅವರನ್ನು ಬಂಧಿಸಲಾಗಿದ್ದು, ಬಂಧನದ ಸಮಯದಲ್ಲಿ ರಕ್ತದೊತ್ತಡ ಹೆಚ್ಚಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ವಾರ ಇದೇ ಬಾಲಕಿಯ ಮೇಲೆ ಪಕ್ಷಿಕೆರೆಯ ಅಪ್ರಾಪ್ತ ಅತ್ಯಾಚಾರದ ಅರೋಪದಂತೆ ಇಬ್ವರು ಅಪ್ರಾಪ್ತರು ಸೇರಿದಂತೆ ಐದು ಮಂದಿಯನ್ನು ಬಂಧಿಸಿ ಜೈಲು ಸೇರಿದ ಘಟನೆಯ ಬೆನ್ನಿಗೆ ಇದೀಗ ಬಾಲಕಿಯ ತಾಯಿ ತನ್ನ ಮಗಳ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ದೂರು ನೀಡಿದ್ದು ಮೂಲ್ಕಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.