ಹಿರಿಯರ ಮಾರ್ಗದರ್ಶನದಿಂದ ಸಮಾಜದಲ್ಲಿ ಉತ್ತಮ ಬದಲಾವಣೆ ಸಾಧ್ಯ-ಕೆ.ಲಕ್ಷ್ಮೀ ನಾರಾಯಣ ಆಸ್ರಣ್ಣ
Friday, July 25, 2025
ಕಿನ್ನಿಗೋಳಿ:ಹಿರಿಯರ ಮಾರ್ಗದರ್ಶನದಿಂದ ಸಮಾಜದಲ್ಲಿ ಉತ್ತಮ ಬದಲಾವಣೆ ಸಾಧ್ಯ.ಹಿರಿಯರನ್ನು ಗೌರವಿಸುವ ಸಂಸ್ಕೃತಿ ಮುಂದುವರಿಯಲಿ ಎಂದು ಕಟೀಲು ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಕೆ.ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು.ಅವರು ಕಿನ್ನಿಗೋಳಿಯ ಯುಗಪುರುಷದಲ್ಲಿ ಯುಗಪುರುಷ"ದ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭ, ಕೊ. ಅ. ಉಡುಪ ಪ್ರಶಸ್ತಿ ಪ್ರದಾನ, ವೇದವಿದ್ವಾಂಸರ ಸಂಮಾನ, ಕೃತಿ ಬಿಡುಗಡೆ, ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಕ.ಸಾ.ಪ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ| ಹರಿಕೃಷ್ಣ ಪುನರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಂಶೋಧಕ ಡಾ| ಪುಂಡಿಕಾ ಗಣಪಯ್ಯ ಭಟ್‌ರವರು ಸಂಸ್ಮರಣಾ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಕೊ. ಅ. ಉಡುಪ ಪ್ರಶಸ್ತಿಯನ್ನು ಡಾ| ಬಿ. ಪ್ರಭಾಕರ ಶಿಶಿಲ ರವರಿಗೆ ನೀಡಿ ಸನ್ಮಾನಿಸಲಾಯಿತು. ವೇದಮೂರ್ತಿ ಕೊಲಕಾಡಿ ವಾದಿರಾಜ ಉಪಾಧ್ಯಾಯ ರವರನ್ನು ಕಮಲಾಕ್ಷಿ ಉಡುಪ ಸ್ಮರಣಾರ್ಥ ವೇದ ವಿದ್ವಾಂಸರ ನೆಲೆಯಲ್ಲಿ ಗೌರವಿಸಲಾಯಿತು ಯುಗಪುರುಷ ಪ್ರಕಟಣಾಲಯದಿಂದ ಪ್ರಕಟಿತ ರೇಖಾ ಸುದೇಶ್ ರಚಿತ ಅಧಮ್ಯ ಕೃತಿಯನ್ನು ಕರ್ಣಾಟಕ ಬ್ಯಾಂಕಿನ ನಿವೃತ್ತ ಅಧಿಕಾರಿ ಶ್ರೀನಿವಾಸ ದೇಶಪಾಂಡೆ ರವರು ಬಿಡುಗಡೆಗೊಳಿಸಿ ಶುಭಾಶಂಸನೆಗೈದರು. ಕಿನ್ನಿಗೋಳಿ ಅನುಗ್ರಹ ಜ್ಯುವೆಲ್ಲರ್ಸ್ ನ ಪೃಥ್ವಿರಾಜ್ ಆಚಾರ್ಯ ವಿದ್ಯಾರ್ಥಿವೇತನ ವಿತರಿಸಿದರು.
ಈ ಸಂದರ್ಭ ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಉದ್ಯಮಿ ಶ್ರೀಪತಿ ಭಟ್ ಮೂಡಬಿದ್ರೆ,ಲೇಖಕಪಿ.ವಿ.ಪ್ರದೀಪಕುಮಾರ್, ಡಾ| ನಯನಾಭಿರಾಮ ಉಡುಪ, ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ,ಡಾ. ನಯನಾಭಿರಾಮ ಉಡುಪ,ಪದ್ಮಶ್ರೀ ಭಟ್, ಲೇಖಕಿ ರೇಖಾ ಸುದೇಶ್, ಪು.ಗುರುಪ್ರಸಾದ್ ಭಟ್ ಕಿನ್ನಿಗೋಳಿ, ಉಪಸ್ಥಿತರಿದ್ದರು.
ಭುವನಾಭಿರಾಮ ಉಡುಪ ಸ್ವಾಗತಿಸಿದರು, ಶರತ್ ಶೆಟ್ಟಿ ಕಿನ್ನಿಗೋಳಿ ನಿರೂಪಿಸಿದರು ಅನುಷಾ ಕರ್ಕೇರ ಧನ್ಯವಾದ ಅರ್ಪಿಸಿದರು