ಯುವ ವಾಹಿನಿ (ರಿ) ಮೂಲ್ಕಿ ಘಟಕದ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ
Friday, July 11, 2025
ಮೂಲ್ಕಿ ಸಮೀಪದ ಕಕ್ವ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ನಿರ್ಮಲಾ ಎನ್ ನಾಯಕ್ ಹೇಳಿದರು.ಅವರು ಯುವ ವಾಹಿನಿ (ರಿ) ಮೂಲ್ಕಿ ಘಟಕದ ಆಶ್ರಯದಲ್ಲಿ ದ. ಕ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ಕಕ್ವ ದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವಿನಯ ಕುಮಾರ್ ಮಟ್ಟು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಈ ಸಂದರ್ಭ ನಿವೃತ್ತ ಪೊಲೀಸ್ ನಿರೀಕ್ಷಕ ಕೆ ಎನ್ ಕೋಟ್ಯಾನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್ ಎಸ್ ಕೋಟ್ಯಾನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಬಿತಾ ಸುವರ್ಣ ,ರವೀಶ್ ಕಾಮತ್ ಕಕ್ವ, ಪ್ರತ್ವೀಕ್ ಕೋಟ್ಯಾನ್ ಉಪಸ್ಥಿತರಿದ್ದರು.
ವಿನಯ್ ಕುಮಾರ್ ಸ್ವಾಗತಿಸಿದರು. ಕು.ಪ್ರೇರಣಾ ಧನ್ಯವಾದವಿತ್ತರು. ಪ್ರೀತಿಕಾ ಡಿ ಕಾರ್ಯಕ್ರಮ ನಿರೂಪಿಸಿದರು.