ಅತೀ ಹೆಚ್ಚು ತೆರಿಗೆ ಸಂಗ್ರಹ- ಮೈಸೂರಿನಲ್ಲಿ ತರಬೇತಿಗೆ ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷರು, ಪಿಡಿಓ, ಕಾರ್ಯದರ್ಶಿ ಆಯ್ಕೆ
Tuesday, July 22, 2025
ಮುಲ್ಕಿ: ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಂಸ್ಥೆಯ ಆರ್.ಜಿ.ಎಸ್.ಎ ಯೋಜನೆಯಡಿ ರಾಜ್ಯ ಗ್ರಾಮ ಪಂಚಾಯತ್‌ಗಳಿಗೆ ಐಎಸ್‌ಒ ಪ್ರಮಾಣೀಕರಣವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಒಂದು ದಿನದ ತರಬೇತಿಯನ್ನು ಹಮ್ಮಿಕೊಂಡಿದ್ದು ಈ ತರಬೇತಿಗೆ ಸ್ವಂತ ಸಂಪನ್ಮೂಲ ಸಂಗ್ರಹಣೆಯಲ್ಲಿ ಅತೀ ಹೆಚ್ಚು ಸಂಗ್ರಹಣೆ ಮಾಡಿದ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಪಿಡಿಒ ಮತ್ತು ಕಾರ್ಯದರ್ಶಿಗಳನ್ನು ನಿಯೋಜಿಸುವಂತೆ ಪಂಚಾಯತ್‌ರಾಜ್ ಆಯುಕ್ತಾಲಯ ಬೆಂಗಳೂರು ಇವರು ಸೂಚಿಸಿರುತ್ತಾರೆ. ತರಬೇತಿಯು ಜು.21 ರಂದು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ವಸತಿ ನಿಲಯ ಮೈಸೂರು ಇಲ್ಲಿ ನಡೆಯಲಿದೆ. ಈ ತರಬೇತಿಯಲ್ಲಿ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಶ್ರೀಮತಿ ಶಶಿಕಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೈಲಜಾ, ಕಾರ್ಯದರ್ಶಿ ಮಂಜುನಾಥ ಭಾಗವಹಿಸಲಿದ್ದಾರೆ. ಮುಲ್ಕಿ ತಾಲೂಕಿನಿಂದ ಕೆಮ್ರಾಲ್ ಮತ್ತು ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಗಳನ್ನು 2024-25ನೇ ಸಾಲಿನ ತೆರಿಗೆ ಸಂಗ್ರಹಣಾ ವರದಿಯಂತೆ ಆಯ್ಕೆ ಮಾಡಲಾಗಿದೆ.
2024-25ನೇ ಸಾಲಿನಲ್ಲಿ ತೆರಿಗೆ ಸಂಗ್ರಹಣೆಯ ಒಟ್ಟು ಬೇಡಿಕೆಯಲ್ಲಿ 74.52% ಮತ್ತು ಚಾಲ್ತಿ ಬೇಡಿಕೆಯಲ್ಲಿ 100% ಪ್ರಗತಿಯನ್ನು ಸಾಧಿಸಿದ ಅತಿಕಾರಿಬೆಟ್ಟು ಗ್ರಾ.ಪಂ. ಮುಲ್ಕಿ ತಾಲೂಕಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಸ್ವಂತ ಸಂಪನ್ಮೂಲ ಸಂಗ್ರಹಣೆಯಲ್ಲಿ ಅತೀ ಹೆಚ್ಚು ಸಂಗ್ರಹಣೆ ಮಾಡಿದ ಕ್ರಿಯಾಶೀಲ ಪಂಚಾಯತ್ ಎಂಬ ಹೆಗ್ಗಳಿಕೆಗೆ ಗ್ರಾಮ ಪಂಚಾಯತ್ ಪಾತ್ರವಾಗಿದ್ದು ಖುಷಿ ತಂದಿದೆ. ಇದಕ್ಕೆ ಸಹಕರಿಸಿದ ಗ್ರಾಮಸ್ಥರಿಗೆ, ಅಧಿಕಾರಿ ವರ್ಗ ಹಾಗೂ ಸಿಬ್ಬಂದಿ ವರ್ಗದವರಿಗೆ ಧನ್ಯವಾದ ಸಲ್ಲಿಸುತ್ತಾ ಮುಂದೆಯೂ ತಮ್ಮೆಲ್ಲರ ಸಹಕಾರವನ್ನು ಬಯಸುತ್ತೇವೆ.
: ಶ್ರೀಮತಿ ಶಶಿಕಲ, ಅಧ್ಯಕ್ಷರು ಅತಿಕಾರಿಬೆಟ್ಟು ಗ್ರಾಮ ಪಂಚಾಯತ್