Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಮುಲ್ಕಿ:ಒಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಏಕಾಹ ಭಜನಾ ಕಾರ್ಯಕ್ರಮ

ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆಯ ಒಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ವೆಂಕಟರಮಣ ಭಜನಾ ಮಂಡಳಿಯ 21ನೇ ವಾರ್ಷಿಕೋತ್ಸವದ ಪ್ರಯುಕ್ತ ಏಕಾಹ ಭಜನಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು 
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಶ್ರೀ ದೇವರ ಸನ್ನಿಧಿಯಲ್ಲಿ ಅರ್ಚಕರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಏಕಾಹ ಭಜನಾ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಲಾಯಿತು. 
ಬಳಿಕ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು 
ಅಹೋರಾತ್ರಿ ಭಜನಾ ಕಾರ್ಯಕ್ರಮ ಸೋಮವಾರ ಬೆಳಿಗ್ಗೆವರೆಗೆ ನಡೆಯಲಿದೆ
ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸುನಿಲ್ ಆಳ್ವ, ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್ ಮತ್ತಿತರರು ಭಜನಾ ಕಾರ್ಯಕ್ರಮಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು
ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು