-->
ದರೋಡೆಗೆ ಸಂಚು,ತಲೆಮರೆಸಿಕೊಂಡ ಆರೋಪಿಯ ಬಂಧನ

ದರೋಡೆಗೆ ಸಂಚು,ತಲೆಮರೆಸಿಕೊಂಡ ಆರೋಪಿಯ ಬಂಧನ

ಮೂಲ್ಕಿ:ದರೋಡೆಗೆ ಸಂಚು ರೂಪಿಸಿದ್ದ ಆರೋಪದಲ್ಲಿ ಪೊಲೀಸರಿಂದ ಬಂಧಿತನಾಗಿ ಕಳೆದ 8 ತಿಂಗಳಿನಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಮೂಲ್ಕಿ ಪೊಲೀಸರು ಚಿಕ್ಕಮಗಳೂರಿನ ತರಿಕೆರೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.ಬಂಧಿತನನ್ನು ರವಿ ನಾಯಕ್ (35) ಎಂದು ಗುರುತಿಸಲಾಗಿದೆ.ಈತ ಮಾರಕಾಯುಧಗಳನ್ನು ಹಿಡಿದುಕೊಂಡು ದರೋಡೆಗೆ ಸಂಚುರೂಪಿಸುತ್ತಿದ್ದ ಆರೋಪದಲ್ಲಿ ಬಂಧಿತನಾಗಿ ಕಳೆದ ಎಂಟು ತಿಂಗಳಿಂದ  ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು,
ಈತನ  ವಿರುದ್ಧ ಸಕಲೇಶಪುರ ಠಾಣೆಯಲ್ಲೂ ಬೇರೊಂದು ಪ್ರಕರಣ ದಾಖಲಾಗಿದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ