ಸುರತ್ಕಲ್ :ರಾಷ್ಟ್ರಿಯ ಆರೋಗ್ಯ ಅಭಿಯಾನದಡಿ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಹೊಸ ಲಸಿಕಾ ಉಗ್ರಾಣ ಕಟ್ಟಡದ ಗುದ್ದಲಿ ಪೂಜೆಯನ್ನು ಮಂಗಳೂರು ನಗರ ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ನೆರವೇರಿಸಿದರು.
ಬಿಜೆಪಿ ಮಹಾ ಶಕ್ತಿಕೇಂದ್ರ ಅಧ್ಯಕ್ಷ ಸುನೀಲ್ ಕುಳಾಯಿ, ದಿನಕರ್ ಇಡ್ಯಾ, ನಿಕಟಪೂರ್ವ ಮನಪಾ ಸದಸ್ಯರಾದ ವರುಣ್ ಚೌಟ, ಶ್ರೀಮತಿ ಸರಿತಾ ಶಶಿಧರ್, ಶೋಭಾ ರಾಜೇಶ್, ಶ್ವೇತಾ ಪೂಜಾರಿ, ಲೋಕೇಶ್ ಬೊಳ್ಳಾಜೆ, ಲಕ್ಷ್ಮೀ ಶೇಖರ್ ದೇವಾಡಿಗ, ನಯನ ಕೋಟ್ಯಾನ್, ವೇದಾವತಿ, ಸುನೀತಾ, ಪದಾಧಿಕಾರಿಗಳು ಸದಸ್ಯರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.