ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಗೆ "ವಿಶಿಷ್ಟ ಸಾಧನಾ ಪ್ರಶಸ್ತಿ"
Saturday, August 30, 2025
ಹಳೆಯಂಗಡಿ:ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ 2024 25 ನೇ ಸಾಲಿನ ಸಾಧನೆಯನ್ನು ಮತ್ತು ಕಾರ್ಯ ವೈಖರಿಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರ ಸಹಕಾರಿ ಬ್ಯಾಂಕ್ ಇವರು "ವಿಶಿಷ್ಟ ಸಾಧನಾ ಪ್ರಶಸ್ತಿಯನ್ನು" ಶನಿವಾರದಂದು ಮಂಗಳೂರಿನ ಕೇಂದ್ರ ಕಚೇರಿಯಲ್ಲಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಹೆಚ್.ವಸಂತ್ ಬೆರ್ನಾರ್ಡ್ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುದರ್ಶನ್ ಅವರನ್ನು ಗೌರವಿಸುವ ಮೂಲಕ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ರವರು ಪ್ರಶಸ್ತಿ ಪ್ರಧಾನ ಮಾಡಿದರು.
2024 - 25 ನೇ ಸಾಲಿನಲ್ಲಿ 351 ಕೋ. ರೂ ಗಳ ವಹಿವಾಟು, ಶೇಕಡ 98.5 ಸಾಲ ವಸೂಲಾತಿ 30 ಕೋಟಿ ನಿರಖು ಠೇವಣಿ ಹೊಂದಿತ್ತು. ಒಟ್ಟು 20 ಸಿಬ್ಬಂದಿಗಳನ್ನು ಹೊಂದಿರುವ ಈ ಸೊಸೈಟಿಯು ಈ ಬಾರಿ ಶೇಕಡಾ 8ರ ದರದಲ್ಲಿ ಪಾಲು ಮುನಾಪೆಯನ್ನು ಸದಸ್ಯರಿಗೆ ಹಂಚಿದ್ದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.
ಪ್ರಿಯದರ್ಶಿನಿ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್ ವಸಂತ್ ಬೆರ್ನಾರ್ಡ್ , ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುದರ್ಶನ್ ಹಾಗೂ ನಿರ್ದೇಶಕ ಉಮಾನಾಥ ಜೆ ಶೆಟ್ಟಿಗಾರ್ ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಸಂದರ್ಭ ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಡಾ. ದೇವಿಪ್ರಸಾದ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಇಂದ್ರಾಲಿ ಜಯಕರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.