ಆ.17:ಕಟೀಲಿನಲ್ಲಿ ರಂಗಗೀತೆಗಳ ಕಾರ್ಯಾಗಾರ
Wednesday, August 13, 2025
ಕಟೀಲು : ದ.ಕ. ಕನ್ನಡ ಸಾಹಿತ್ಯ ಪರಿಷತ್ತು ಮೂಲ್ಕಿ ತಾಲೂಕು ಘಟಕದಿಂದ ತಾ. 17 ರ ಭಾನುವಾರ ಬೆಳಿಗ್ಗೆ ಗಂಟೆ 9ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮೂಲ್ಕಿ ತಾಲೂಕಿನ ಶಿಕ್ಷಣ ಸಂಸ್ಥೆಗಳ ಆಸಕ್ತ ವಿದ್ಯಾರ್ಥಿಗಳಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವೀಪೂರ್ವ ಕಾಲೇಜಿನಲ್ಲಿ ರಂಗಗೀತೆಗಳ ಕಾರ್ಯಾಗಾರ ನಡೆಯಲಿದೆ. ಮಂಗಳೂರು ಜರ್ನಿ ಥೇಟರ್ ಗ್ರೂಪ್ ಇವರು ಕಾರ್ಯಾಗಾರವನ್ನು ನಡೆಸಿಕೊಡಲಿದ್ದು, ತಾಲೂಕಿನ ಪ್ರೌಢಶಾಲೆ, ಪದವೀಪೂರ್ವ ಕಾಲೇಜು ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ ಎಂದು ಮೂಲ್ಕಿ ಕಸಾಪ ಅಧ್ಯಕ್ಷ ಮಿಥುನ ಕೊಡೆತ್ತೂರು ತಿಳಿಸಿದ್ದಾರೆ.