ಕಟೀಲು - ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮೂಲ್ಕಿ ತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.