ಶ್ರೀ ವಿಜಯವಾಹಿನಿ ಗಂಜಿಮಠ ಸಂಸ್ಥೆಯ ವತಿಯಿಂದ ಪುಸ್ತಕ ವಿತರಣೆ
Friday, August 1, 2025
ಕೈಕಂಬ : ಶ್ರೀ ವಿಜಯವಾಹಿನಿ ಗಂಜಿಮಠ ಸಂಸ್ಥೆಯ ವತಿಯಿಂದ ಗಂಜಿಮಠದ ಸರ್ಕಾರಿ ಉರ್ದು ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲ ಮಕ್ಕಳಿಗೆ ಉಚಿತ ಬರೆಯುವ ಪುಸ್ತಕಗಳನ್ನು ವಿತರಿಸಿದರು.ನಿವೃತ್ತ ಶಿಕ್ಷಕ ಸುಬ್ರಾಯ ಭಟ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ ಪೂಜಾರಿ ಅವರು ಮಾತನಾಡಿ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತಹ ಕಾರ್ಯಗಳು ನಿರಂತರವಾಗಿ ನಡೆಯಲಿ ಎಂದರು.
ಗಂಜಿಮಠ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಮಾಲತಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ನಿವೃತ್ತ ಗ್ರಾಮ ಸಹಾಯಕ ಶಿವರಾಮ ಕೊಟ್ಟಾರಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭ ಶ್ರೀ ವಿಜಯವಾಹಿನಿ ಸಂಸ್ಥೆಯ ಅಧ್ಯಕ್ಷ ಸುನಿಲ್ ಜಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ ಕರ್ಭಾರಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ,ಗಂಜಿಮಠ ಗ್ರಾಪಂ ಸದಸ್ಯ ಮೊಹಮ್ಮದ್ ಸಾದಿಕ್, ಗಂಜಿಮಠ ಗ್ರಾಪಂ ಪಿಡಿಒ ಪ್ರಕಾಶ್, ಗ್ರಾಪಂ ಮಾಜಿ ಸದಸ್ಯ ದಾಮೋದರ ಕುಲಾಲ್, ಅಬಕಾರಿ ಇಲಾಖೆಯ ನಿವೃತ್ತ ಅಧೀಕ್ಷಕ ಅಮರನಾಥ ಎಸ್. ಭಂಡಾರಿ, ಎಸ್‍ಡಿಎಂಸಿ ಅಧ್ಯಕ್ಷ ರಿಯಾಝ್, ಶಾಲೆಯ ಮುಖ್ಯ ಶಿಕ್ಷಕಿಯರಾದ ಗ್ರೆಟ್ಟಾ ಡೊಟ್ಟಿವಾಝ್ ಮತ್ತು ಸಮೀಯಾ ಶೇಖ್, ಮಳಲಿ ಬಿಲ್ಲವ ಸಂಘದ ಸದಸ್ಯ ನೀಲಯ ಪೂಜಾರಿ, ಶ್ರೀ ವಿಜಯವಾಹಿನಿ ಸಂಸ್ಥೆಯ ಗೌರವಾಧ್ಯಕ್ಷ ಚಂದ್ರಶೇಖರ ಪೂಜಾರಿ ಅರ್ಬಿ, ಸಂಸ್ಥೆಯ ಸದಸ್ಯ ಜನಾರ್ದನ ಕುಲಾಲ್, ಶಿಕ್ಷಕಿಯರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಶಿಕ್ಷಕ ಪ್ರವೀಣ್ ಕುಟಿನ್ಹೊ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.