ಹೊಲಿಗೆ ಯಂತ್ರ ಹಾಗೂ ಅರಸು ಶಿಕ್ಷಣ ಸಮೃದ್ಧಿ ಯೋಜನೆಯಡಿಯಲ್ಲಿ ಅನಾಥ ವಿಧ್ಯಾರ್ಥಿಗೆ ಸಹಾಯಧನ ವಿತರಣೆ ಕಾರ್ಯಕ್ರಮ
Tuesday, August 26, 2025
ಮುಲ್ಕಿ:ಮುಲ್ಕಿ ಅರಮನೆ, ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅರಸು ಸ್ವಾವಲಂಬಿಯೋಜನೆಯಡಿಯಲ್ಲಿ ಅಶಕ್ತ ನಿರುದ್ಯೋಗಿ ಮಹಿಳಾ ಪಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ ಹಾಗೂ ಅರಸು ಶಿಕ್ಷಣ ಸಮೃದ್ಧಿ ಯೋಜನೆಯಡಿಯಲ್ಲಿ ಅನಾಥ ವಿಧ್ಯಾರ್ಥಿಗೆ ಸಹಾಯಧನ ವಿತರಣೆ ಕಾರ್ಯಕ್ರಮ ಮಂಗಳವಾರ ಸಂಜೆ
ಮುಲ್ಕಿ ಅರಮನೆ ಧರ್ಮ ಚಾವಡಿಯಲ್ಲಿ ನಡೆಯಿತು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ವಹಿಸಿ ಮಾತನಾಡಿ ಟ್ರಸ್ಟ್ ವತಿಯಿಂದ ಧಾರ್ಮಿಕ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಗೌರವಿಸುವ ಕಾರ್ಯ ಹಾಗೂ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸಹಾಯ ಹಸ್ತ ಕಾರ್ಯಕ್ರಮ ನಿರಂತರವಾಗಿ ನಡೆಯಲಿದೆ ಎಂದರು.
ಹೊಲಿಗೆ ಯಂತ್ರ ಹಾಗೂ ಸಹಾಯಧನ ಹಸ್ತಾಂತರ ಕಾರ್ಯಕ್ರಮವನ್ನು ಯಕ್ಷದ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ನೆರವೇರಿಸಿ ಮಾತನಾಡಿ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಾಯ ಹಸ್ತ ಸಹಕಾರಿಯಾಗಿದ್ದು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಐಕಳ ಗ್ರಾ ಪಂ ಸದಸ್ಯೆ ರೇಖಾ ಶೆಟ್ಟಿ ,ಮುಲ್ಕಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಮಂಜುನಾಥ್ ಬಿ ಎಸ್.,
ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್, ಮುಲ್ಕಿ ಅರಮನೆ, ಚಾರಿಟೇಬಲ್ ಟ್ರಸ್ಟ್ ನ ನಿರ್ದೇಶಕ ಗೌತಮ್ ಜೈನ್, ವಕೀಲರಾದ ಚಂದ್ರಶೇಖರ್,ವಿನೋದ್ ಸಾಲ್ಯಾನ್ ಬೆಳ್ಳಾಯರು ಮತ್ತಿತರರು ಉಪಸ್ಥಿತರಿದ್ದರು.
ವಿನೋದ್ ಸಾಲ್ಯಾನ್ ಸ್ವಾಗತಿಸಿ ನಿರೂಪಿಸಿದರು.