
ಆ.16:ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಸೀಯಾಳಭಿಷೇಕ
Tuesday, August 12, 2025
ತೋಕೂರು:ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರು ಇಲ್ಲಿ ಆ. 16 ರ ಶನಿವಾರ ಸಿಂಹ ಸಂಕ್ರಮಣದ ಪ್ರಯುಕ್ತ ಶ್ರೀ ದೇವರಿಗೆ ಊರಪರವೂರ ಭಕ್ತರ ವತಿಯಿಂದ ಬೆಳಿಗ್ಗೆ ಗಂಟೆ 10:30 ರಿಂದ ಸಾಮೂಹಿಕ ಸೀಯಾಳಭಿಷೇಕ, ಮಹಾಪೂಜೆ, ಅನ್ನ ಸಂತರ್ಪಣೆ, ಸಂಜೆ 7:30 ರಿಂದ ಸಾಮೂಹಿಕ ಹೂವಿನ ಪೂಜೆಯು ನಡೆಯಲಿರುವುದು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸಿ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ಸಂಖ್ಯೆ 9902440801