ತೋಕೂರು:ಮೊಸರು ಕುಡಿಕೆಯ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ
Saturday, August 30, 2025
ತೋಕೂರು : ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ತೋಕೂರಿನಲ್ಲಿ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಡೆಯುವ ಮೊಸರು ಕುಡಿಕೆಯ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ತೋಕೂರು ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ಟಿ ಕೆ ಮಧುಸೂಧನ ಆಚಾರ್ ಅವರು ದೀಪ ಪ್ರಜ್ವಲನೆಯ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಆ. 28 ರಂದು ವಿವಿಧ ಸಂಘ ಸಂಸ್ಥೆ ಹಾಗೂ ವೈಯಕ್ತಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ನಂತರ ಗಣಪತಿ ವಿಸರ್ಜನೆ ನಡೆಯಿತು. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಗುರುರಾಜ್ ಎಸ್. ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಸಮಿತಿ ಸದಸ್ಯರಾದ ಪುರುಷೋತ್ತಮ ಕೋಟ್ಯಾನ್, ಸಂಪತ್ ಜೆ ಶೆಟ್ಟಿ ತೋಕೂರು ಗುತ್ತು , ಅಶೋಕ್ ಕುಂದರ್, ಸವಿತಾ ಶರತ್, ಸಂಘ ಸಂಸ್ಥೆಗಳ ಸದಸ್ಯರು, ಗ್ರಾಮಸ್ಥರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.