ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
Sunday, September 21, 2025
ಬಜಪೆ:ಮುಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಇದರ ಆಶ್ರಯದಲ್ಲಿ ಬಜಪೆ ಕಾಂಗ್ರೆಸ್ ಪ್ರಜಾಪ್ರತಿನಿಧಿ ಸಮಿತಿಯ ಸಹಭಾಗಿತ್ವದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಯುವ ನಾಯಕರಾದ ಮಿಥುನ್ ರೈ ಅವರ ಮಾರ್ಗದರ್ಶನದಲ್ಲಿ ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶವು ಆದಿತ್ಯವಾರದಂದು ಬಜಪೆ "ಕರಂಬಾರು ಗಾರ್ಡನ್" ಅಂತೋನಿ ಕಟ್ಟೆ ಯಲ್ಲಿ ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್ ಅವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ಕೆಪಿಸಿಸಿ ಸದಸ್ಯ ವಸಂತ್ ಬೆರ್ನಾರ್ಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಬಜ್ಪೆ ಪಂಚಾಯತ್ ಮಾಜಿ ಅಧ್ಯಕ್ಷ ಸಾಹುಲ್ ಹಮೀದ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಕಂಬಾರ್, ಬಜ್ಪೆ ಕಾಂಗ್ರೆಸ್ ಪ್ರಜಾಪ್ರತಿನಿಧಿ ಅಧ್ಯಕ್ಷ ಬಿ. ಜೆ. ರಹೀಮ್, ಹಿರಿಯ ನಾಯಕರಾದ ಮೋನಪ್ಪ ಶೆಟ್ಟಿ ಎಕ್ಕಾರು , ಶ್ರೀಮತಿ ವಿಜಯ ಶೆಟ್ಟಿ, ಜಗನ್ನಾಥ್ ಸಾಲ್ಯಾನ್, ಶೇಖರ್ ಪೂಜಾರಿ, ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡೆನ್ನೀಸ್ ಡಿ'ಸೋಜಾ,ಬಜ್ಪೆ ವಲಯದ ಪದಾಧಿಕಾರಿಗಳು, ಘಟಕದ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿರಿದ್ದರು.